×
Ad

ಬ್ರಹ್ಮಾವರ | ಬಡ 50 ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

Update: 2025-12-27 16:35 IST

ಬ್ರಹ್ಮಾವರ, ಡಿ.27: ಬ್ರಹ್ಮಾವರ ತಾಲೂಕು ಜಮೀಯ್ಯತುಲ್ ಫಲಾಹ್ ಘಟಕದ ಆಶ್ರಯದಲ್ಲಿ ತಾಲೂಕಿನ ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ಬ್ರಹ್ಮಾವರದ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ನಿವೃತ್ತ ಪ್ರಾಂಶುಪಾಲ, ಶಿಕ್ಷಣ ತಜ್ಞ ಡಾ.ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಪ್ರಸಕ್ತ ಕಾಲಮಾನದಲ್ಲಿ ಶಿಕ್ಷಣಕ್ಕೆ ಕೊಡುತ್ತಿರುವ ಪ್ರೋತ್ಸಾಹ ಸಮಾಜದಲ್ಲಿನ ಬದಲಾವಣೆಗೆ ಪೂರಕವಾಗಿದೆ. ವಿದ್ಯೆ ಪಡೆಯುವುದರ ಜೊತೆ ಜೊತೆಗೆ ಸಂಸ್ಕಾರವನ್ನು ಬೆಳೆಸಿಕೊಂಡರೆ ಮುಂದಿನ ಜನಾಂಗವನ್ನು ಸುಸಂಸ್ಕೃತರನ್ನಾಗಿ ಕಾಣಬಹುದು ಎಂದು ಹೇಳಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜಮೀಯ್ಯತುಲ್ ಫಲಾಹ್ ಕೇಂದ್ರ ಸಮಿತಿಗೆ ನೂತನವಾಗಿ ಆಯ್ಕೆಗೊಂಡಿರುವ ಅಶ್ಫಾಕ್ ಅಹ್ಮದ್ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು. ಸುಮಾರು 50 ವಿದ್ಯಾರ್ಥಿಗಳಿಗೆ ಒಂದು ಲಕ್ಷದ ಐವತ್ತು ಸಾವಿರ ರೂಪಾಯಿ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಿಸಲಾಯಿತು.

ಅಧ್ಯಕ್ಷತೆಯನ್ನು ಬ್ರಹ್ಮಾವರ ತಾಲೂಕು ಘಟಕ ಅಧ್ಯಕ್ಷ ಕೆ.ಪಿ.ಇಬ್ರಾಹಿಂ ಮಟಪಾಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ, ಅನಿವಾಸಿ ಭಾರತೀಯ ಮೊಹಸ್ಸಿನ್ ಸಾಹೇಬ್ ಬ್ರಹ್ಮಾವರ ಉಪಸ್ಥಿತರಿದ್ದರು.

ತಾಲೂಕು ಘಟಕದ ಅಧ್ಯಕ್ಷ ಕೆ.ಎ.ಇಬ್ರಾಹಿಂ ಸ್ವಾಗತಿಸಿದರು. ಖಜಾಂಚಿ ಇಬ್ರಾಹಿಂ ಸಾಹೇಬ್ ಕೋಟ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸದಸ್ಯ ಶೇಹೆರಾಜ್ ಪ್ರಾರ್ಥನೆಗೈದರು. ಕಾರ್ಯದರ್ಶಿ ಆಸೀಫ್ ಬೈಕಾಡಿ ವಂದಿಸಿದರು. ತಾಜುದ್ದಿನ್ ಇಬ್ರಾಹಿಂ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News