ಬ್ರಹ್ಮಾವರ: ಶಾಲಾ ಬಸ್ಸಿಗೆ ಲಾರಿ ಢಿಕ್ಕಿ; ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ
Update: 2025-06-18 13:57 IST
ಬ್ರಹ್ಮಾವರ, ಜೂ.18: ಲಾರಿಯೊಂದು ಖಾಸಗಿ ಶಾಲಾ ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಕೆಲವು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡ ಘಟನೆ ಬ್ರಹ್ಮಾವರ ಧರ್ಮವರ ಆಡಿಟೋರಿಯಂ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಬ್ರಹ್ಮಾವರ ಜಿ.ಎಂ ವಿದ್ಯಾನಿಕೇತನ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಕುಂದಾಪುರದಿಂದ ಬಂದು ಧರ್ಮಾವರ ಆಡಿಟೋರಿಯಂ ಸರ್ಕಲ್ ಬಳಿ ಯೂ ಟರ್ನ್ ಮಾಡುವಾಗ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಬಸ್ಸಿನಲ್ಲಿದ್ದ ಕೆಲವು ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿ ಗಳನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬ್ರಹ್ಮಾವರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.