ಬ್ರಹ್ಮಾವರ: ಫೋನ್ ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು
Update: 2023-10-30 09:48 IST
ಕೋಟ: ಪೋನ್ ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ.
ಸ್ಥಳೀಯ ಕಿರಾಡಿ ಹಂಚಿನಮನೆ ನಿವಾಸಿ, ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ ಪ್ರಮೋದ್ ಶೆಟ್ಟಿ ( 24) ಮೃತ ಯುವಕ. ಮನೆಯ ಹೊರೆಗೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದು, ಬ್ರಹ್ಮಾವರಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯ ಸಾವನ್ನಪ್ಪಿದ್ದಾರೆ.
ಪ್ರಮೋದ್ ಬಡ ಕುಟುಂಬದವನಾಗಿದ್ದು, ಶಿಕ್ಷಣ ಮುಗಿಸಿ ಬ್ರಹ್ಮಾವರದ ಬಟ್ಟೆಯಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.