×
Ad

ಯುವ ಭಾರತ ನಿರ್ಮಾಣಕ್ಕೆ ಮುನ್ನಡಿ ಬರೆದ ಬಜೆಟ್: ಯಶ್‌ಪಾಲ್ ಸುವರ್ಣ

Update: 2026-02-01 19:54 IST

ಉಡುಪಿ, ಫೆ.1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿ ಮಂಡಿಸಿರುವ ಬಜೆಟ್, ದೇಶದ ಆರ್ಥಿಕ ವ್ಯವಸ್ಥೆಗೆ ಹೊಸ ಚೈತನ್ಯ ನೀಡುವ ಮೂಲಕ ವಿಕಸಿತ ಭಾರತಕ್ಕೆ ಪೂರಕವಾಗಿ ಯುವ ಭಾರತ ನಿರ್ಮಾಣಕ್ಕೆ ಮುನ್ನುಡಿ ಬರೆಯಲಿದೆ. ವಿಶ್ವದ ಆರ್ಥಿಕತೆಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಭಾರತವನ್ನು ತೃತೀಯ ಸ್ಥಾನಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್ ಪ್ರಮುಖ ಪಾತ್ರ ವಹಿಸಲಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಭಿಪ್ರಾಯ ಪಟ್ಟಿದ್ದಾರೆ.

ದೇಶಾದ್ಯಂತ ಏಳು ಹೈಸ್ಪೀಡ್ ರೈಲು ಕಾರಿಡಾರ್‌ಗಳ ಅಭಿವೃದ್ಧಿ, ರಕ್ಷಣಾ ವಲಯಕ್ಕೆ ವಿಶೇಷ ಆದ್ಯತೆ, ಯುವ ಜನತೆಗೆ ಉದ್ಯೋಗ ಸೃಷ್ಟಿಗಾಗಿ ಐಟಿ ಸಂಸ್ಥೆಗಳಿಗೆ ಪ್ರೋತ್ಸಾಹ, 16ನೇ ಹಣಕಾಸು ಆಯೋಗದ ಮೂಲಕ ರಾಜ್ಯ ಗಳಿಗೆ ಗರಿಷ್ಠ ಅನುದಾನ, ಮಹಿಳಾ ಉದ್ಯಮಿಗಳಿಗೆ ಪ್ರೊತ್ಸಾಹ ನೀಡುವ ನಿಟ್ಟಿನಲ್ಲಿ ಶಿ ಮಾರ್ಟ್ ಯೋಜನೆ, ಎಲ್ಲಾ ರಾಜ್ಯಗಳಿಗೆ ಯೂನಿ ವರ್ಸಿಟಿ ಟೌನ್‌ಶಿಪ್ ಜೊತೆಗೆ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಆದ್ಯತೆ, ಕೃಷಿ, ಮೀನುಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಮಹತ್ವ ನೀಡುವ ಕಾರ್ಯಕ್ರಮಗಳನ್ನು ಬಜೆಟ್ ಒಳಗೊಂಡಿರು ವುದು ದೇಶದ ಜನತೆಯಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News