ಕಾಪು ಸಮೀಪ ಬಸ್ ಪಲ್ಟಿ: ಹಲವರಿಗೆ ಗಾಯ
Update: 2025-05-26 20:36 IST
ಕಾಪು: ಭಾರೀ ಮಳೆಯ ಹಿನ್ನೆಲೆಯಲ್ಲಿ ಒಮ್ಮೇಲೆ ಬ್ರೇಕ್ ಹಾಕಿದ ಪರಿಣಾಮ ಬಸ್ಸೊಂದು ಕಾಪು ಸಮೀಪದ ಪೊಲಿಪು ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿ ಇಂದು ಸಂಜೆ ವೇಳೆ ಪಲ್ಟಿಯಾಗಿದ್ದು, ಇದರಿಂದ ನಾಲ್ಕೈದು ಪ್ರಯಾಣಿಕರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ವೇಗದೂತ ಬಸ್, ಒಮ್ಮೇಲೆ ಬ್ರೇಕ್ ಹಾಕಿದ ಪರಿಣಾಮ ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಪಲ್ಟಿಯಾಗಿ ಬಿತ್ತೆನ್ನಲಾಗಿದೆ. ಇದರಿಂದ ಬಸ್ಸಿನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.