ಬಸ್ ಟೈಮಿಂಗ್ ವಿಚಾರಕ್ಕೆ ಸಂಬಂಧಿಸಿ ಗಲಾಟೆ; ನಾಲ್ವರು ವಶಕ್ಕೆ
ಕಾಪು, ಜು.27: ಬಸ್ ಟೈಮಿಂಗ್ ವಿಚಾರಕ್ಕೆ ಸಂಬಂಧಿಸಿ ಎರಡು ಖಾಸಗಿ ಬಸ್‌ಗಳ ಚಾಲಕರು ಮತ್ತು ನಿರ್ವಾಹಕರು ಸಾರ್ವಜನಿಕ ಸ್ಥಳದಲ್ಲೇ ಪರಸ್ಪರ ಗಲಾಟೆ ನಡೆಸಿದ ಘಟನೆ ಸೋಮವಾರ ಬೆಳಿಗ್ಗೆ ಕಾಪು ಹೊಸ ಮಾರಿಗುಡಿ ಅಂಡರ್ ಪಾಸ್ ಸಮೀಪದ ಬಸ್ ನಿಲ್ದಾಣದ ಎದುರು ನಡೆದಿದೆ
ಜುಲೈ 27ರಂದು ಬೆಳಿಗ್ಗೆ 9:30ರ ಸುಮಾರಿಗೆ ಎರಡು ಖಾಸಗಿ ಬಸ್‌ಗಳಾದ ಸಂದೇಶ್ ಹಾಗೂ ಆನಂದ್‌ನ ಸಿಬ್ಬಂದಿ ಟೈಮಿಂಗ್ ವಿಚಾರಕ್ಕೆ ಪರಸ್ಪರ ಬಸ್‌ಗಳನ್ನು ತಾಗಿಸಿಕೊಂಡು, ದೂಡಾಡಿಕೊಂಡು, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಂಡು ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟುಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಾಗಿದ್ದು ಪ್ರಕರಣದ ಆರೋಪಿಗಳಾದ ಬಸ್ ಚಾಲಕರಾದ ರಮೇಶ್ ಮತ್ತು ಅಭಿಷೇಕ್, ನಿರ್ವಾಹಕರಾದ ವಿಜಯಕುಮಾರ್ ಹಾಗೂ ಹರೀಶ್ ಬಿ. ಹೆಗ್ಡೆ ಎನ್ನುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನೆಯಲ್ಲಿ ಭಾಗಿಯಾಗಿದ್ದ ಎರಡು ಬಸ್‌ಗಳನ್ನೂ ವಶಪಡಿಸಿ ಕೊಳ್ಳಲಾಗಿದ್ದು ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಇಲಾಖಾಧಿಕಾರಿ ಗಳು ಮಾಹಿತಿ ನೀಡಿದ್ದಾರೆ.