×
Ad

ಕಸ್ತೂರಿ ರಂಗನ್ ವರದಿಗೆ ವಿರೋಧ: ಜಡ್ಕಲ್ ಗ್ರಾಪಂ ಸದಸ್ಯರಿಂದ ಉಪಚುನಾವಣೆ ಬಹಿಷ್ಕಾರ

Update: 2024-09-30 22:09 IST

ಬೈಂದೂರು: ಕಸ್ತೂರಿ ರಂಗನ್ ವರದಿ ವಿರೋಧಿಸಿ ಜಡ್ಕಲ್ ಗ್ರಾಮ ಪಂಚಾಯತ್‌ನ ಎಲ್ಲಾ 18 ಸದಸ್ಯರು ಅ.21ರಂದು ನಡೆಯಲಿರುವ ವಿಧಾನ ಪರಿಷತ್ ಉಪಚುನಾವಣೆಯನ್ನು ಬಹಿಷ್ಕರಿಸುವ ನಿರ್ಧಾರ ಕೈಗೊಂಡಿದ್ದಾರೆ.

ಪರಿಸರ ಸೂಕ್ಷ್ಮ ಪ್ರದೇಶ, ಬಫರ್ ಝೋನ್ ಶೂನ್ಯಕ್ಕೆ ಇಳಿಸುವುದು, ಈಗಾಗಲೇ ಪರಿಸರ ಸೂಕ್ಷ್ಮ ಪ್ರದೇಶದ ಬಗ್ಗೆ ಹೊರಡಿಸಿರುವ ಸುತ್ತೋಲೆಯನ್ನು ಮೂಕಾಂಬಿಕಾ ಅಭಯಾರಣ್ಯದ ಸೂಕ್ಷ್ಮ ಪ್ರದೇಶ ಎಂಬ ನೆಪದಿಂದ ಸಕ್ಷಮ ಪ್ರಾಧಿಕಾರದಿಂದ ವಾಣಿಜ್ಯ ಭೂ-ಪರಿವರ್ತನೆಗೆ ಪೂರ್ವಾನುಮತಿಯನ್ನು (ಯೋಜನಾ ಪ್ರಾಧಿಕಾರ ಉಡುಪಿ) ಪಡೆಯುವ ಸೂಚನೆ ರದ್ದುಗೊಳಿಸು ವಂತೆ ಅವರು ಬೇಡಿಕೆಯನ್ನು ಸರಕಾರದ ಮುಂದಿರಿಸಿದ್ದಾರೆ.

ಜಡ್ಕಲ್ ಗ್ರಾಮ ಪಂಚಾಯತ್ ಸದಸ್ಯರಾದ ಪಾರ್ವತಿ, ಭಾರತಿ ಜಿ. ಶೆಟ್ಟಿ, ವನಜಾಕ್ಷಿ ಎಸ್.ಶೆಟ್ಟಿ, ಲಕ್ಷ್ಮಣ ಶೆಟ್ಟಿ, ಕೆ.ವಿದ್ಯಾವತಿ ಕನ್ನಂತ, ನಾರಾಯಣ ಶೆಟ್ಟಿ, ವಿ.ಜೆ.ದೇವದಾಸ್, ಲಕ್ಷ್ಮೀ ಎಸ್.ಚಂದನ್, ಶ್ರೀಮತಿ, ಚಂದ್ರಮೋಹನ್, ಸೂಲ್ಯ ಬೋವಿ, ಸುಂದರನಾರಾಯಣ, ಸುನೀತಾ, ಮಂಜು, ಶ್ರೀನಿವಾಸ, ಸವಿತಾ, ಪಾರ್ವತಿ ಹಾಗೂ ನಾಗೇಶ ಅವರು ಗ್ರಾಮಸ್ಥರ ಹಿತದೃಷ್ಟಿಯಿಂದ ವಿಧಾನ ಪರಿಷತ್ ಉಪ ಚುನಾವಣೆ ಬಹಿಷ್ಕಾರದ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News