ಬೈಂದೂರು | ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು
Update: 2025-12-07 21:56 IST
ಬೈಂದೂರು, ಡಿ.7: ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಡಿ.6ರಂದು ರಾತ್ರಿ ವೇಳೆ ಉಪ್ಪುಂದ ಕಂಬದಕೋಣೆ ಸೊಸೈಟಿಯ ಎದುರು ನಡೆದಿದೆ.
ಮೃತರನ್ನು ನಾಗರಾಜ ಖಾರ್ವಿ ಎಂದು ಗುರುತಿಸಲಾಗಿದೆ.
ಉಪ್ಪುಂದ ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದ ಗಣೇಶ್ ಟ್ರಾವೆಲ್ಸ್ ಬಸ್, ಎದುರಿನಲ್ಲಿ ಹೋಗುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಬೈಕ್ ಸವಾರ ನಾಗರಾಜ ಖಾರ್ವಿ ಗಂಭೀರ ಗಾಯಗೊಂಡಿದ್ದು, ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.