ಬೈಂದೂರು: ಯುವಕ ಆತ್ಮಹತ್ಯೆ
Update: 2026-07-12 23:13 IST
ಬೈಂದೂರು:ಯುವಕನೊಬ್ಬ ಜು.5ರಂದು ಯಾವುದೋ ವಿಷ ಪದಾರ್ಥ ಸೇವಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ರವಿವಾರ ಬೆಳಗಿನ ಜಾವ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತ ಯುವಕನನ್ನು ಹೇರಂಜಾಲು ಗ್ರಾಮದ ಹರೀಶ (32) ಎಂದು ಗುರುತಿಸಲಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.