×
Ad

ಪಾದಚಾರಿಗಳಿಗೆ ಕಾರು ಢಿಕ್ಕಿ: ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

Update: 2026-01-17 21:28 IST

ಕೋಟ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಓರ್ವ ವ್ಯಕ್ತಿ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಜ.16ರಂದು ರಾತ್ರಿ ವೇಳೆ ಕಾರ್ಕಡ ಗ್ರಾಮದ ರಿಶಿ ಆಟೋ ವೆಲ್ಡಿಂಗ್ ವರ್ಕಸ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಇಂಟಿರಿಯಲ್ ಡಿಸೈನ್ ಕೆಲಸ ಮಾಡಿಕೊಂಡಿದ್ದ ಪ್ರದೀಪ ಎಂದು ಗುರುತಿಸಲಾಗಿದೆ. ಅವರೊಂದಿಗೆ ಕೆಲಸ ಮಾಡಿಕೊಂಡಿದ್ದ ಶಶಿ ತೀವ್ರವಾಗಿ ಗಾಯಗೊಂಡು ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿಯ ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಕಾರು, ರಸ್ತೆಯ ಬದಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಚಾಲಕ ಬಳಿಕ ತನ್ನ ಕಾರನ್ನು ನಿಲ್ಲಿಸದೆ ಅಲ್ಲಿಂದ ಪರಾರಿಯಾದನು ಎನ್ನಲಾಗಿದೆ.

ಅಪಘಾತದಿಂದ ಪ್ರದೀಪ ಹಾಗೂ ಶಶಿ ಎಂಬವರು ತೀವ್ರವಾಗಿ ಗಾಯ ಗೊಂಡಿದ್ದು, ಕೂಡಲೇ ಅವರನ್ನು ಸ್ಥಳೀಯರು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಪ್ರದೀಪ್ ಮೃತಪಟ್ಟಿ ರುವುದಾಗಿ ತಿಳಿಸಿದರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News