ಕಾರು ಪಲ್ಟಿ: ಗಾಯಾಳು ಮೃತ್ಯು
Update: 2025-07-25 22:13 IST
ಗಂಗೊಳ್ಳಿ, ಜು.25: ಮುಳ್ಳಿಕಟ್ಟೆ ರಿಕ್ಷಾ ನಿಲ್ದಾಣ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಕಾರೊಂದು ಪಲ್ಟಿಯಾಗಿ ಗಾಯಗೊಂಡ ಇಬ್ಬರಲ್ಲಿ ಒಬ್ಬರು ಚಿಕಿತ್ಸೆ ಫಲಕಾರಿಯಾಗದೇ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಸಂಜೆ ಮೃತಪಟ್ಟಿದ್ದಾರೆ.
ಮೃತರನ್ನು ತಾಜುದ್ದೀನ್ ಎಂದು ಗುರುತಿಸಲಾಗಿದೆ. ಕಾರು ಚಾಲಕ ತಾಜ್ಮುಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.