ಮಲಬಾರ್ ಗೋಲ್ಡ್ನಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ
ಉಡುಪಿ, ನ.1: ನಗರದ ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್‌ನ ಉಡುಪಿ ಮಳಿಗೆಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಖಾ ಮುಖ್ಯಸ್ಥ ವಿಜಯ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ಕರ್ನಾಟಕ ರಾಜ್ಯೋತ್ಸವ ಹಾಗೂ ಮಲಬಾರ್ ದಿನದ ಅಂಗವಾಗಿ ಅಜ್ಜರಕಾಡು ಪಾರ್ಕ್‌ನಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ಹರೀಶ್ ಎಂ.ಜಿ., ರಾಘವೇಂದ್ರ, ಸುಧಾಕರ್, ಮಾರುಕಟ್ಟೆ ಉಸ್ತುವಾರಿ ತಂಝೀಮ್ ಶಿರ್ವ, ಸಿಬ್ಬಂದಿ, ಗ್ರಾಹಕರು ಉಪಸ್ಥಿತರಿದ್ದರು.