×
Ad

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಮೀಲಾದುನ್ನಬಿ ಆಚರಣೆ

Update: 2024-09-16 11:38 IST

ಉಡುಪಿ, ಸೆ.16: ಪ್ರವಾದಿ ಮುಹಮ್ಮದ್(ಸ.) ಪೈಗಂಬರ್ ರವರ ಜನ್ಮ ದಿನಾಚರಣೆ ಮೀಲಾದುನ್ನಬಿ ಸೋಮವಾರ ಉಡುಪಿ ಜಿಲ್ಲಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಕಾಪು ಪೊಲಿಪು, ಉಚ್ಚಿಲ, ಮೂಳೂರು, ಪಡುಬಿದ್ರೆ, ಕಾರ್ಕಳ, ಶಿರ್ವ, ಕಟಪಾಡಿ, ನೇಜಾರು, ದೊಡ್ಡಣಗುಡ್ಡೆ, ಕುಂದಾಪುರಗಳಲ್ಲಿ ಮೀಲಾದ್ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು. ಆಯಾ ಮಸೀದಿಗಳಿಂದ ಹೊರಟ ಮೆರವಣಿಗೆಯು ಪ್ರಮುಖ ಬೀದಿಗಳಲ್ಲಿ ಸಾಗಿ ವಾಪಸ್ ಮಸೀದಿಗಳಿಗೆ ಆಗಮಿಸುವ ಮೂಲಕ ಸಮಾಪ್ತಿಗೊಂಡಿತು.

ಮೆರವಣಿಗೆಯಲ್ಲಿ ಪ್ರವಾದಿ ಸಂದೇಶ, ದಫ್ ಕುಣಿತ, ಸ್ಕೌಟ್ ಹಾಗೂ ಮದ್ರಸದ ಮಕ್ಕಳು ಸಾಗಿಬಂದರು. ಕಾಪು ಪೊಲಿಪು ಜುಮಾ ಮಸೀದಿಯಿಂದ ಹೊರಟ ಮೆರವಣಿಗೆಯು ಕೊಪ್ಪಲಂಗಡಿಯವರೆಗೆ ಸಾಗಿ, ಬಳಿಕ ಇತರ ಮಸೀದಿಗಳಿಂದ ಆಗಮಿಸಿದ ಮೆರವಣಿಗೆ ಜೊತೆ ವಾಪಸ್ ಪೊಲಿಪು ಮಸೀದಿಗೆ ಆಗಮಿಸಿ ಸಮಾಪ್ತಿಗೊಂಡಿತು. ಮೆರವಣಿಗೆಯಲ್ಲಿ ಆಲಂಕೃತ ವಾಹನಗಳಲ್ಲಿ ದಫ್ ಕುಣಿತ, ಮದ್ರಸ ಮಕ್ಕಳು ಗಮನಸೆಳೆದರು.

ಮೀಲಾದುನ್ನಬಿ ಮೆರವಣಿಗೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News