ಉಡುಪಿ, ಅ.13: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅ.15ರ ಸಂಜೆ ಉಡುಪಿಯ ಉಚ್ಚಿಲ ಹಾಗೂ ಮಂಗಳೂರಿನ ಕುದ್ರೋಳಿಯಲ್ಲಿ ನಡೆಯುತ್ತಿರುವ ದಸರಾ-ನವರಾತ್ರಿ ಮಹೋತ್ಸವಗಳಲ್ಲಿ ಭಾಗವಹಿಸಲು ಕರಾವಳಿಗೆ ಆಗಮಿಸಲಿದ್ದಾರೆ.

ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಅಂದು ಸಂಜೆ 4ಗಂಟೆಗೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿಗಳು ಅಲ್ಲಿಂದ ರಸ್ತೆ ಮಾರ್ಗವಾಗಿ ಸಂಜೆ 4:40ಕ್ಕೆ ಕಾಪು ತಾಲೂಕಿನ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಮಹಿಳಾ ದಸರಾ ಉದ್ಘಾಟಿಸಿ, ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸುವರು.

ಸಂಜೆ 6 ಗಂಟೆಗೆ ರಸ್ತೆ ಮಾರ್ಗವಾಗಿ ಉಚ್ಚಿಲದಿಂದ ಮಂಗಳೂರಿನ ಕುದ್ರೋಳಿಗೆ ತೆರಳುವ ಡಿ.ಕೆ.ಶಿವಕುಮಾರ್, ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ಆಯೋಜಿಸಿರುವ ಮಂಗಳೂರು ದಸರಾ 2026- ನವರಾತ್ರಿ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ರಾತ್ರಿ 8 ಗಂಟೆಗೆ ರಸ್ತೆ ಮಾರ್ಗವಾಗಿ ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸುವರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor