×
Ad

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಪ್ರಶಾಂತ್ ಶೆಟ್ಟಿಗೆ ಅಭಿನಂದನೆ

Update: 2023-11-16 21:40 IST

ಉಡುಪಿ : ಪರ್ಕಳ ಸಮೀಪದ ಪರೀಕದ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ವತಿಯಿಂದ ಪ್ರತಿಷ್ಟಿತ ಕರ್ನಾಟಕ ರಾಜೋತ್ಸವ ಪ್ರಶಸ್ತಿ ಪುರಸ್ಕೃತರಾದ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಉಜಿರೆ ಇದರ ಪ್ರಾಂಶುಪಾಲರಾದ ಡಾ.ಪ್ರಶಾಂತ ಶೆಟ್ಟಿ ಇವರನ್ನು ಅಭಿನಂದಿಸುವ ಕಾರ್ಯಕ್ರಮ ಆಸ್ಪತ್ರೆಯ ಕ್ಷೇಮ ಹಾಲ್‌ನಲ್ಲಿ ನಡೆಯಿತು.

ಉಡುಪಿಯ ಅಷ್ಟಮಠಗಳಲ್ಲೊಂದಾದ ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥ ಶ್ರೀಪಾದರು ಡಾ.ಪ್ರಶಾಂತ್ ಶೆಟ್ಟಿ ಇವರನ್ನು ಆಸ್ಪತ್ರೆಯ ವತಿಯಿಂದ ಶಾಲುಹೊದಿಸಿ ಸನ್ಮಾನ ಪತ್ರ ಮೈಸೂರುಪೇಟ ತೊಡಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು.

ಬಳಿಕ ತಮ್ಮ ಆಶೀರ್ವಚನದಲ್ಲಿ ಡಾ.ಶೆಟ್ಟಿ ಅವರ ಕಾರ್ಯಕ್ಷಮತೆಯ ಬಗ್ಗೆ ಉತ್ತಮ ಮೆಚ್ಚುಗೆಯ ನುಡಿಗಳನ್ನಾಡಿದ ಕಾಣಿಯೂರು ಶ್ರೀಗಳು, ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುವ ಯೋಗ ಕೂಡಿಬರಲಿ ಎಂದು ಶುಭಹಾರೈಸಿದರು.

ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಡಿತ್ತಾಯ ಉಪಸ್ಥಿತರಿದ್ದು, ಸ್ವಾಮೀಜಿ ಅವರನ್ನು ಸನ್ಮಾನಿಸಿ ಗೌರವಿಸಿದರು. ಧರ್ಮಸ್ಥಳ ಶಾಂತಿವನ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ, ಪರೀಕ ಸೌಖ್ಯ ವನದ ಮುಖ್ಯ ವೈದ್ಯಾಧಿಕಾರಿ ಡಾ. ಗೋಪಾಲ ಪೂಜಾರಿ, ಡಾ.ದೀಪ ಪ್ರಶಾಂತ್ ಶೆಟ್ಟಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಡಾ. ಪೂಜಾ ಜಿ. ಸನ್ಮಾನ ಪತ್ರವನ್ನು ವಾಚಿಸಿದರೆ, ಸಂಸ್ಥೆಯ ವ್ಯವಸ್ಥಾಪಕ ಪ್ರವೀಣ್‌ಕುಮಾರ್ ಪ್ರಾಸ್ತಾವಿಕ ಮಾತು ಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಡಾ.ಶೋಭಿತ್ ಶೆಟ್ಟಿ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News