ಕರಾವಳಿ ಜಿಲ್ಲೆಗಳ ಮೀನುಗಾರಿಕೆ, ಬಂದರು, ಜಲಸಾರಿಗೆ ಇಲಾಖೆಗೆ ಸಂಬಂಧಿಸಿ ಸಮಾಲೋಚನಾ ಸಭೆ
ಉಡುಪಿ, ನ.9: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಮೀನುಗಾರಿಕೆ, ಬಂದರು ಮತ್ತು ಜಲಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಇಲಾಖಾ ವಿಷಯಗಳ ಕುರಿತು ಸಮಾಲೋಚನೆ ಸಭೆ ಇಂದು ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ನಡೆಯಿತು.
ಸಭೆಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಭಾಗವಹಿಸಿದ್ದರು.
ಅಲ್ಲದೇ ವಿಧಾನಸಭೆ ಸಭಾಪತಿ ಯು.ಟಿ.ಖಾದರ್, ರಾಜ್ಯ ಆರೋಗ್ಯ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಆರ್. ಗುಂಡೂರಾವ್, ರಾಜ್ಯ ಬಂದರು ಹಾಗೂ ಮೀನುಗಾರಿಕೆ ಸಚಿವ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ್ ವೈದ್ಯ ಪಾಲ್ಗೊಂಡಿದ್ದರು.
ಸಭೆಯಲ್ಲಿ ಕರಾವಳಿ ಭಾಗದ ಶಾಸಕರಾದ ದಿನಕರ ಶೆಟ್ಟಿ, ಉಮಾನಾಥ್ ಕೋಟ್ಯಾನ್, ಶಿವರಾಮ್ ಹೆಬ್ಬಾರ್, ಗುರುರಾಜ್ ಗಂಟಿಹೊಳೆ, ಯಶ್ಪಾಲ್ ಸುವರ್ಣ, ವೇದವ್ಯಾಸ್ ಕಾಮತ್, ಸತೀಶ್ ಸೈಲ್, ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹಾಗೂ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.