ಅಜೆಕಾರು, ನ.22: ಕ್ರೇನೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ದೊಡ್ಡಪಲ್ಕೆ ಕ್ರಾಸ್ ಬಳಿ ನ.21ರಂದು ರಾತ್ರಿ 9ಗಂಟೆ ಸುಮಾರಿಗೆ ನಡೆದಿದೆ.

ಮೃತರನ್ನು ಲೊಕೇಶ ಕುಲಾಲ್ ಎಂದು ಗುರುತಿಸಲಾಗಿದೆ. ಅಂಡಾರು ಕಡೆಯಿಂದ ಅಜೆಕಾರು ಕಡೆಗೆ ಹೋಗುತ್ತಿದ್ದ ಕ್ರೇನ್ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಅಜೆಕಾರು ಕಡೆಯಿಂದ ಅಂಡಾರು ಕಡೆಗೆ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಸವಾರ ಬೈಕ್ ಸಮೇತ ರಸ್ತೆಗೆ ಬಿದ್ದರು. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ.

ಅಪಘಾತ ನಡೆಸಿದ ಕ್ರೇನ್ ಚಾಲಕ ಕ್ರೆನ್ ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ದೂರಲಾಗಿದೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor