×
Ad

ಕ್ರಿಕೆಟ್: ಸುಶಾಂತ್ ರಾಜ್ ಬಿರ್ತಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Update: 2023-11-01 19:25 IST

ಉಡುಪಿ: ಚಿಕ್ಕೋಡಿಯ ಮೂಡಲಗಿಯಲ್ಲಿ ಇತ್ತೀಚೆಗೆ ನಡೆದ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ರಾಜ್ಯಮಟ್ಟದ 17ರ ವಯೋಮಾನದ ಒಳಗಿನವರ ಕ್ರಿಕೆಟ್ ಪಂದ್ಯಾಕೂಟದಲ್ಲಿ ಮೈಸೂರು ವಿಭಾಗಮಟ್ಟವನ್ನು ಪ್ರತಿನಿಧಿಸಿದ ಬ್ರಹ್ಮಾವರ ಎಸ್‌ಎಂಎಸ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಶಾಂತ್ ರಾಜ್ ಬಿರ್ತಿ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ.

ಇವರು ಬಿಹಾರದ ಪಾಟ್ನಾದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರಿಕೆಟ್ ಪಂದ್ಯಾಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರು ಬ್ರಹ್ಮಾವರದ ಶ್ಯಾಮರಾಜ್ ಬಿರ್ತಿ ಮತ್ತು ಸುಮನ ದಂಪತಿ ಪುತ್ರರಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News