ದಯಾನಂದ ಬಳೆಗಾರ ಅವರಿಗೆ ನಿಟ್ಟೂರು ಭೋಜಪ್ಪ ಸುವರ್ಣ ಪ್ರಶಸ್ತಿ
Update: 2026-01-12 20:40 IST
ದಯಾನಂದ ಬಳೆಗಾರ
ಉಡುಪಿ: ಗುಂಡಿಬೈಲು ಯಕ್ಷಗಾನ ಕಲಾಕ್ಷೇತ್ರದ ವತಿಯಿಂದ ಯಕ್ಷಗಾನ ರಂಗದಲ್ಲಿ ಸಾಧನೆಗೈದ ಹಿರಿಯ ಕಲಾವಿದರಿಗೆ ಕಳೆದ 28 ವರ್ಷಗಳಿಂದ ನೀಡುತ್ತಿರುವ ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿಗೆ ಈ ಬಾರಿ ಹಿರಿಯ ಯಕ್ಷಗಾನ ಕಲಾವಿದ ದಯಾನಂದ ಬಳೆಗಾರ ನಾಗೂರು ಆಯ್ಕೆಯಾಗಿದ್ದಾರೆ.
ಇವರು ಐದು ದಶಕಗಳ ಕಾಲ ಇಡಗುಂಜಿ, ಗುಂಡಬಾಳ, ಸಾಲಿಗ್ರಾಮ, ಮಂದಾರ್ತಿ ಮೇಳಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇವರ ಕಲಾಸೇವೆಯನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳು ಸನ್ಮಾನಿಸಿವೆ. ಮುಂದಿನ ತಿಂಗಳ ಫೆ.8ರಂದು ಯಕ್ಷಗಾನ ಕಲಾಕ್ಷೇತ್ರದ 75ನೇ ವಾರ್ಷಿಕೋತ್ಸವ ಸಮಾರಂಭ ದಲ್ಲಿ ದಯಾನಂದ ಬಳೆಗಾರ ನಾಗೂರು ಇವರಿಗೆ ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.