×
Ad

ಡಿ.26-28: ಮಾಳ ಶ್ರೀ ಗುರುಕುಲ ವಿದ್ಯಾವರ್ಧಕ ಶಾಲೆಯ ಅಮೃತ ಮಹೋತ್ಸವ

Update: 2025-12-18 12:01 IST

ಕಾರ್ಕಳ: ಶ್ರೀ ಗುರುಕುಲ ವಿದ್ಯಾವರ್ಧಕ ಸಂಘ(ರಿ.) ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇದರ ಅಮೃತ ಮಹೋತ್ಸವ ಕಾರ್ಯಕ್ರಮ ಡಿ.26ರಿಂದ 28ರವರೆಗೆ ನಡೆಯಲಿದೆ ಎಂದು ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಡಾ.ಎಂ ಪ್ರಭಾಕರ್ ಜೋಶಿ ಹೇಳಿದ್ದಾರೆ.

ಅವರು ಕಾರ್ಕಳ ಪತ್ರಿಕಾ ಭವನದ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡಿ.26ರಂದು ಬೆಳಗ್ಗೆ 8 ಗಂಟೆಗೆ ಗಣ ಹೋಮ, ನೂತನ ತರಗತಿ ಕೊಠಡಿಗಳ ಸಭಾಭವನ ಮತ್ತು ಪ್ರವೇಶದ್ವಾರದ ಉದ್ಘಾಟನೆ, ಪೂರ್ವಾಹ್ನ 11ಕ್ಕೆ ಧ್ವಜಾರೋಹಣ ಮತ್ತು ದೀಪ ಪ್ರಜ್ವಲನೆ ನಡೆಯಲಿದೆ.

ಗೋಪಾಲ್ ಶೇರಿಗಾರ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು.

ಸಂಜೆ 5ಕ್ಕೆ ಸಾಂಸ್ಕೃತ ನೃತ್ಯ ವೈಭವ ಕಾರ್ಯಕ್ರಮ 'ಜೋಡು ಜೀಟಿಗೆ' ಜನಪದ ತುಳು ನಾಟಕ ನಡೆಯಲಿದೆ . ಡಿ.27ರಂದು ಸಭಾ ಕಾರ್ಯಕ್ರಮ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ. ಸಂಜೆ 5ಕ್ಕೆ ಸಾಂಸ್ಕೃತಿಕ ವೈವಿಧ್ಯ, ಶಾಲಾ ಮಕ್ಕಳಿಂದ 'ಭಕ್ತ ಪ್ರಹ್ಲಾದ' ಪೌರಾಣಿಕ ನಾಟಕ ನಡೆಯಲಿದೆ. ರಾತ್ರಿ 7ಕ್ಕೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ವಿ.ಸುನೀಲ್ ಕುಮಾರ್ ವಹಿಸುವರು. ಮುಖ್ಯ ಅತಿಥಿಯಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ.

ರಾತ್ರಿ 9ಕ್ಕೆ ಸದ್ಭಾವನ ಮಹಿಳಾ ಯಕ್ಷಗಾನ ಮಂಡಳಿ, ಬೆಂಗಳೂರು ಅವರಿಂದ 'ಮಹಿಷ ಮರ್ದಿನಿ' ಯಕ್ಷಗಾನ ಪ್ರದರ್ಶನ ನಡೆಯಲಿದೆ .ಡಿ.28ರಂದು ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಕಾರ್ಯಕ್ರಮ ನಡೆಯಲಿದೆ. ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾನಂದಾಜೀ ಸಭಾಧ್ಯಕ್ಷತೆ ವಹಿಸಲಿದ್ದಾರೆ.

ಬಳಿಕ ಶಾಲಾ ಹಳೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಭಾಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ .ವೀರೇಂದ್ರ ಹೆಗ್ಡೆ ಮುಖ್ಯ ಅತಿಥಿಯಾಗಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮೋಹನ್ ಅಳ್ವ ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ.

ರಾತ್ರಿ ಒಂಭತ್ತರಿಂದ ಸಂಗೀತ ರಸಮಂಜರಿ ರಾತ್ರಿ 10:30ರಿಂದ ಗುರುಕುಲ ಶಾಲೆಯ ಹಳೆ ವಿದ್ಯಾರ್ಥಿಗಳಿಂದ 'ಬಾಕಿಲ್ ದೆಪ್ಪುಲೆ' ತುಳು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಗುರುಕುಲ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗಜಾನನ ಮರಾಠೆ, ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ನಾಗಭೂಷಣ ಜೋಶಿ, ಗುರುಕುಲ ಶಾಲೆಯ ಸಂಚಾಲಕ ಸುಧಾಕರ ಡೊಂಗ್ರೆ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ನಾಗಭೂಷಣ್ ಮರಾಠೆ, ಮುಖ್ಯ ಶಿಕ್ಷಕಿ ಪೂರ್ಣಿಮಾ ಶೆಣೈ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News