ಡಿ.25: ಕಾರ್ಕಳ ಬಿಜೆಪಿ ವತಿಯಿಂದ 'ಅಟಲ್ ಸ್ಮರಣೆʼ
ಕಾರ್ಕಳ : ಕಾರ್ಕಳ ಬಿಜೆಪಿ ವತಿಯಿಂದ 'ಅಟಲ್ ಸ್ಮರಣೆ' ಕಾರ್ಯಕ್ರಮ ಡಿ.25ರಂದು ತಾಲೂಕು ಕಚೇರಿ ಬಳಿ ಅಟಲ್ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್ ತಿಳಿಸಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 5ಕ್ಕೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ವಾಜಪೇಯಿ ಅವರ ಜೀವನ ಚರಿತ್ರೆಯನ್ನು ಬಿಂಬಿಸುವ ವಿಡಿಯೋ ಪ್ರದರ್ಶನ ಏರ್ಪಡಿಸಲಾಗಿದೆ.
ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ದೇಶಭಕ್ತಿ ಬಿಂಬಿಸುವ ಸಮೂಹ ಗೀತೆಗಳ ಗಾಯನ ನಡೆಯಲಿದೆ.
ಸಂಜೆ 4:30ಕ್ಕೆ ಪಾರ್ಕ್‌ನಲ್ಲಿರುವ ಅಟಲ್ ಅವರ ಮೂರ್ತಿಗೆ ಪುಷ್ಪಾರ್ಚನೆ ನಡೆಯಲಿದೆ. ಸಂಜೆ 5 ಗಂಟೆಗೆ ಸಭಾ ಕಾರ್ಯಕ್ರಮ ಆರಂಭವಾಗಲಿದ್ದು, ವಿವಿಧ ಭಾವಭಕ್ತಿ ಕಾರ್ಯಕ್ರಮಗಳು ಜರುಗಲಿವೆ.
ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ಸುನಿಲ್ ಕುಮಾರ್, ಜಿಲ್ಲಾಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರು ಸೇರಿದಂತೆ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.
ಕಾರ್ಕಳ ತಾಲೂಕು ವ್ಯಾಪ್ತಿಯ ಬೂತ್ ಮಟ್ಟದಿಂದ ಹಿಡಿದು ತಳಮಟ್ಟದ ಹಿರಿಯ ಕಾರ್ಯಕರ್ತರು ಈ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪರಿಸರ ಪ್ರೇಮಿಯಾಗಿದ್ದ ಅಟಲ್ ಅವರ ನೆನಪಿನಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದ್ದು, ವರ್ಷಪೂರ್ತಿ ಈ ಅಭಿಯಾನ ಮುಂದುವರಿಯಲಿದೆ. ವಿಶೇಷವಾಗಿ 8ನೇ ತರಗತಿಯ ಹೈಸ್ಕೂಲು ವಿದ್ಯಾರ್ಥಿಗಳಿಗೆ ಗಿಡಗಳನ್ನು ನೀಡಿ, ಅವುಗಳನ್ನು ಪೋಷಿಸುವ ಜವಾಬ್ದಾರಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.
2500ಕ್ಕೂ ಅಧಿಕ ಕಾರ್ಯಕರ್ತರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ದೋಸೆ ಕ್ಯಾಂಪ್ ಆಯೋಜಿಸಲಾ ಗಿದ್ದು, ಉಪಹಾರದಲ್ಲಿ ದೋಸೆಯನ್ನು ವಿತರಿಸಲಾಗುತ್ತದೆ ಎಂದು ನವೀನ್ ನಾಯಕ್ ತಿಳಿಸಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹವೀರ್ ಹೆಗ್ಡೆ, ಕಾರ್ಕಳ ಬಿಜೆಪಿ ಪ್ರಮುಖರಾದ ಬೋಳ ಸತೀಶ್ ಪೂಜಾರಿ, ವಿಖ್ಯಾತ್ ಶೆಟ್ಟಿ, ರಾಕೇಶ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿದ್ದರು.