ನೂತನ ಉಡುಪಿ ಜಿಲ್ಲಾಸ್ಪತ್ರೆ ಆರಂಭಕ್ಕೆ ಆಗ್ರಹ: ಎರಡನೇ ದಿನಕ್ಕೆ ಕಾಲಿಟ್ಟ ಧರಣಿ
ಉಡುಪಿ: ನೂತನ ಉಡುಪಿ ಜಿಲ್ಲಾಸ್ಪತ್ರೆ ಆರಂಭಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಧರಣಿ ಸ್ಥಳದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕರವೇ ಗೌರವಾಧ್ಯಕ್ಷ ಅನ್ಸಾರ್ ಅಹಮದ್, ಅಧ್ಯಕ್ಷ ಸುಧೀರ್ ಪೂಜಾರಿ, ಮಹಿಳಾ ಜಿಲ್ಲಾಧ್ಯಕ್ಷೆ ದೇವಕಿ ಬಾರ್ಕೂರು, ಜಿಲ್ಲಾ ಸಂಚಾಲಕ ಸೈಯದ್ ನಿಜಾಮುದ್ದೀನ್, ಪ್ರಧಾನ ಕಾರ್ಯದರ್ಶಿ ವೀರೇಶ್, ಮಹಿಳಾ ಪ್ರಧಾನ ಕಾರ್ಯದರ್ಶಿ ಸುಮಾ ಆಚಾರ್ಯ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಅ. 3ರಂದು ಬೆಳಗ್ಗೆ 10 ಗಂಟೆಗೆ ಧರಣಿಯ ಮೂರನೇ ದಿನದ ಪ್ರತಿಭಟನೆ ನಡೆಯಲಿದ್ದು, ನೂತನ ಜಿಲ್ಲಾಸ್ಪತ್ರೆ ಆರಂಭಿಸಲು ಸರ್ಕಾರದ ಬಳಿ ಹಣದ ಕೊರತೆ ಇದ್ದರೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ದೇಣಿಗೆ ಸಂಗ್ರಹಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ ಗೌರವಾಧ್ಯಕ್ಷ ಅನ್ಸಾರ್ ಅಹಮದ್ ತಿಳಿಸಿದ್ದಾರೆ.