×
Ad

ದೇಶದ ಪ್ರಗತಿಯಲ್ಲಿ ಶಿಕ್ಷಣದ ಅಭಿವೃದ್ಧಿ ಕೂಡ ಮುಖ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Update: 2025-12-23 21:50 IST

ಕುಂದಾಪುರ, ಡಿ.23: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ದುಡಿಯುತ್ತಿರುವ ಶಿಕ್ಷಣ ಸಂಸ್ಥೆಗಳ ಸೇವೆ ಅಭಿನಂದನೀಯ. ದೇಶದ ಪ್ರಗತಿಯಲ್ಲಿ ಶಿಕ್ಷಣದ ಅಭಿವೃದ್ಧಿಯೂ ಉಲ್ಲೆಖನೀಯ ಎಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ಕುಂದಾಪುರ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಬಿಎಂಎಸ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಕುಂದಾಪುರ ಎಜುಕೇಷನ್ ಸೊಸೈಟಿಯ ಸುವರ್ಣ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸಂಕಲ್ಪ ಈ ವಿದ್ಯಾ ಸಂಸ್ಥೆಗಳಲ್ಲಿ ಕಾಣುತ್ತಿದ್ದೇವೆ. ಸಾಮಾಜಿಕ ಕಾಳಜಿಯುಳ್ಳ ಮೌಲ್ಯಯುತ ಶಿಕ್ಷಣದ ಪ್ರತಿಬಿಂಬ ಕಾಣುತ್ತಿದ್ದೇವೆ. ಶಿಕ್ಷಣ ಹಾಗೂ ನೈತಿಕ ಶಿಕ್ಷಣದಿಂದ ಭಾರತ ಈ ಹಿಂದೆ ವಿಶ್ವ ಗುರುವಾಗಿತ್ತು. ಸಂಸ್ಕೃತಿ ಹಾಗೂ ಪರಂಪರೆಯಲ್ಲಿ ಭಾರತ ವಿಶ್ವ ಮಾನ್ಯವಾಗಿದೆ. ಶಾರೀರಿಕ, ಮಾನಸಿಕ ಹಾಗೂ ಬೌದ್ಧಿಕ ವಿಕಸನಗಳು ದೇಶದ ಬೆಳವಣಿಗೆಗೆ ಪೂರಕವಾಗಿದೆ ಎಂದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಆಧ್ಯಾತ್ಮ ಚಿಂತಕ ಡಾ.ಬಾಲಕೃಷ್ಣ ಗುರೂಜಿ ತಿರುಪತಿ ಮಾತನಾಡಿದರು. ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಅರ್ಚಕ ಮೂರ್ತಿ ಕಾಳಿದಾಸ್ ಭಟ್, ಕುಂದಾಪುರ ಎಜುಕೇಷನ್ ಸೊಸೈಟಿ ಕಾರ್ಯದರ್ಶಿ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನವೀನ್ ಕುಮಾರ್ ಶೆಟ್ಟಿ, ಎಚ್‌ಎಂಎಂ ಹಾಗೂ ವಿಕೆಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಡಾ.ಚಿಂತನಾ ರಾಜೇಶ್ ಉಪಸ್ಥಿತರಿದ್ದರು.

ಕುಂದಾಪುರ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಬಿ.ಎಂ.ಸುಕುಮಾರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲ ಡಾ.ಉಮೇಶ್ ಶೆಟ್ಟಿ ಕೊತ್ತಾಡಿ, ಕುಂದಾಪುರ ಎಜುಕೇಷನ್ ಸೊಸೈಟಿ ಬೆಳೆದು ಬಂದ ಬಗೆ ವಿವರಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ಸ್ವಾಗತಿಸಿದರು, ಉಪನ್ಯಾಸಕ ರಕ್ಷಿತ್ ರಾವ್ ಗುಜ್ಜಾಡಿ ಪರಿಚಯಿಸಿದರು. ಉಪನ್ಯಾಸಕಿ ಪ್ರಥ್ವಿಶ್ರೀ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಗಿರಿರಾಜ್ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News