×
Ad

ವಿದ್ಯಾರ್ಥಿನಿಯರಿಗೆ ಅಭಿವಿನ್ಯಾಸ ಕಾರ್ಯಕ್ರಮ

Update: 2023-10-26 17:41 IST

ಉಡುಪಿ, ಅ.26: ಅಜ್ಜರಕಾಡು ಡಾ.ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯರಿಗೆ ಅಭಿವಿನ್ಯಾಸ ಕಾರ್ಯಕ್ರಮವನ್ನು ಬುಧವಾರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಬ್ರಹ್ಮಾವರ ಕ್ರಾಸ್ ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲ ಡಾ.ಜಿ.ರೋಬರ್ಟ್ ಕ್ಲೈವ್ ಮಾತನಾಡಿ, ವಿದ್ಯಾರ್ಥಿನಿ ಯರಿಗೆ ಜ್ಞಾನದೊಂದಿಗೆ ಇತರ ಕೌಶಲಗಳನ್ನು ವೃದ್ಧಿಸಿ, ಈಗಿನ ಕಾರ್ಪೊರೇಟ್ ಜಗತ್ತಿಗೆ ಬೇಕಾದಂತೆ ವಿದ್ಯಾರ್ಜನೆ ಗಳಿಸಿದರೆ ಉತ್ತಮ ಉದ್ಯೋಗಾವಕಾಶ ಗಳಿಂದ ವಂಚಿತರಾಗುವುದಿಲ್ಲ ಎಂದು ಕಿವಿಮಾತು ಹೇಳಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ ಶೆಟ್ಟಿ ವಹಿಸಿದ್ದರು. ವಾಣಿಜ್ಯ ಶಾಸ್ತ್ರ ಸ್ನಾತಕೋತ್ತರ ವಿಭಾಗದ ಸಂಚಾಲಕ ರವಿಪ್ರಸಾದ ಕೆ.ಜಿ. ಅತಿಥಿಗಳನ್ನು ಪರಿಚಯಿಸಿದರು. ಕಾರ್ಯಕ್ರಮದಲ್ಲಿ ಅಶೋಕ ಭಂಡಾರಿ, ಡಾ.ರಾಮದಾಸ ಪ್ರಭು, ಡಾ.ರವೀಶ ಎಂ. ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ.ವಾಣಿ ಆರ್.ಬಲ್ಲಾಳ್ ಉಪಸ್ಥಿತರಿದ್ದರು.

ಎಲ್ಲಾ ಸ್ನಾತಕೋತ್ತರ ವಿಭಾಗಗಳ ಸಂಚಾಲಕ ಪ್ರೊ.ಕೆ.ಶ್ರೀಧರ ಪ್ರಸಾದ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಅಬ್ದುಲ್ ರಜಾಕ್ ವಂದಿಸಿದರು. ಅನಿಷಾ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News