×
Ad

ಡಿಜಿಟಲ್ ಅರೆಸ್ಟ್ ಪ್ರಕರಣ : ಮಂಗಳೂರು ಪೊಲೀಸರ ಕಾರ್ಯಾಚರಣೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶ್ಲಾಘನೆ

Update: 2025-11-01 10:54 IST

ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂ. ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಶ್ಲಾಘಿಸಿದ್ದಾರೆ.

ಡಿಸಿಪಿಗಳಾದ ಮಿಥುನ್‌ ಹಾಗೂ ರವಿಶಂಕರ್ ಅವರು ಈಗಾಗಲೆ ಸಂತ್ರಸ್ತೆಗೆ, ಅವರು ಕಳೆದುಕೊಂಡ 17 ಲಕ್ಷ ರೂ. ಗಳ ವರ್ಗಾವಣೆಯ ಆದೇಶ ಪತ್ರವನ್ನು ಹಸ್ತಾಂತರಿಸಲಾಗಿದ್ದು, ಪೊಲೀಸ್ ಇಲಾಖೆಯ ಕಾರ್ಯ ನಿಜಕ್ಕೂ ಶ್ಲಾಘನೀಯ. ಇಂಥ ಕಾರ್ಯಚರಣೆಗಳಿಂದ ಸಾರ್ವಜನಿಕರಿಗೆ ಅದರಲ್ಲೂ ಹಿರಿಯ ನಾಗರಿಕರಿಗೆ ಪೊಲೀಸ್ ಇಲಾಖೆ ಮೇಲೆ ಮತ್ತಷ್ಟು ವಿಶ್ವಾಸ ಹೆಚ್ಚುತ್ತದೆ. ಸೈಬರ್ ವಂಚನೆ, ಡಿಜಿಟಲ್ ಅರೆಸ್ಟ್ ವಂಚನೆಗಳಿಂದ ನಾಗರಿಕರು ದೂರ ಉಳಿಯಬೇಕು, ಪೊಲೀಸರಿಗೆ ಸಹಕರಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News