ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ: ಅರ್ಜಿ ಆಹ್ವಾನ
ಉಡುಪಿ, ಜ.1: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್‌ಮೆಂಟ್ ಮೂಡುಬಿದಿರೆ ಇದರ ವತಿಯಿಂದ ಜನವರಿ ತಿಂಗಳಿನಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ತರಬೇತಿಗೆ ಉಡುಪಿ ಜಿಲ್ಲೆಯ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿಧದ ಸಹಕಾರ ಸಂಘ/ಬ್ಯಾಂಕ್‌ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನ. ಕನಿಷ್ಠ ವಿದ್ಯಾರ್ಹತೆ ಎಸೆಸೆಲ್ಸಿ ತೇರ್ಗಡೆಯಾಗಿದ್ದು, ಪ್ರವೇಶ ಪಡೆದ ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ 600ರೂ. ಹಾಗೂ ಇತರೆ ಎಲ್ಲಾ ಅಭ್ಯರ್ಥಿಗಳಿಗೆ 500ರೂ. ಶಿಷ್ಯ ವೇತನ ನೀಡಲಾಗುವುದು.
ಸಹಕಾರ, ಸಹಕಾರ ಪತ್ತು ಮತ್ತು ಬ್ಯಾಂಕಿಂಗ್, ಸಹಕಾರ ಸಂಘಗಳ ನಿರ್ವಹಣೆ, ಸಹಕಾರ ಸಂಘಗಳ ಕಾಯಿದೆ ಅಂಶಗಳು, ಸಹಕಾರ ಲೆಕ್ಕಪತ್ರ ಗಳು ಮತ್ತು ಲೆಕ್ಕಪರಿಶೋಧನೆ ಹಾಗೂ ಕಂಪ್ಯೂಟರ್ ಅಪರೇಷನ್ ಬಗ್ಗೆ ಪಠ್ಯಕ್ರಮವಿರುತ್ತದೆ.
ಸಹಕಾರ ಡಿಪ್ಲೊಮಾ ಕೋರ್ಸ್ ಪಡೆದ ಅಭ್ಯರ್ಥಿಗಳಿಗೆ ಡಿಸಿಸಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ಮತ್ತು ಇತರೆ ಎಲ್ಲಾ ರೀತಿಯ ಸಹಕಾರ ಸಂಘ/ಸಂಸ್ಥೆಗಳು ಮತ್ತು ಬ್ಯಾಂಕ್‌ಗಳ ಉದ್ಯೋಗ ಅವಕಾಶ ಗಳಲ್ಲಿ ನೇಮಕಾತಿಗೆ ಸಹಕಾರ ಕಾಯಿದೆ ಮತ್ತು ನಿಯಮಗಳಿಗೆ ಅನುಸಾರವಾಗಿ ಆದ್ಯತೆ ಕಲ್ಪಿಸಲಾಗುವುದು.
ಜೊತೆಗೆ ಈ ಪಠ್ಯಕ್ರಮವು ಕೆಎಎಸ್ ಪರೀಕ್ಷೆಯ ಸಹಕಾರ ಮತ್ತು ಗ್ರಾಮೀಣ ಅಭಿವೃದ್ಧಿ ವಿಷಯ ಮತ್ತು ಸಹಕಾರ ಇಲಾಖೆಯ ಕೋ- ಆಪರೇಟಿವ್ ಇನ್‌ಸ್ಪೆಕ್ಟರ್ ಹುದ್ದೆ ಹಾಗೂ ಎಲ್ಲಾ ಸಹಕಾರ ಸಂಘ/ಸಂಸ್ಥೆಗಳ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಪೂರಕವಾಗಿದೆ.
ಸಹಕಾರ ಕಾಯ್ದೆ ನಿಯಮಗಳ ಅನ್ವಯ ಸಹಕಾರ ಸಂಘಗಳ ಅಧಿಕಾರಿ/ ಸಿಬ್ಬಂದಿಗಳಿಗೆ ಡಿಸಿಎಂ. ಕೋರ್ಸ್ ಕಡ್ಡಾಯವಾಗಿದ್ದು, ಸಹಕಾರ ಸಂಘ/ಸಂಸ್ಥೆಗಳಲ್ಲಿನ ಖಾಯಂ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ದೂರ ಶಿಕ್ಷಣ ಕೋರ್ಸ್‌ಗೆ ಪ್ರವೇಶ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ: 08258-236561, ಮೊ:7022429440, 8971361396 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.