×
Ad

ಕುಂದಾಪುರ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಡಿಸಿ ಜೊತೆ ಚರ್ಚೆ

Update: 2024-08-13 17:48 IST

ಕುಂದಾಪುರ, ಆ.13: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಸಮಸ್ಯೆಗಳ ಬಗ್ಗೆ ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಉಡುಪಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದರು.

ಕ್ಷೇತ್ರ ವ್ಯಾಪ್ತಿಯ ಕೊರಗ ಸಮುದಾಯದವರಿಗೆ ಜಾಗ ಮಂಜೂರು ಮಾಡುವಂತೆ, ಬ್ರಹ್ಮಾವರ ತಾಲೂಕು ಕೋಟ ಹೋಬಳಿ ಕೋಡಿ ಗ್ರಾಮದಲ್ಲಿ ವಾಸ್ತವ್ಯ ಹೊಂದಿರುವ ಕುಟುಂಬಗಳಿಗೆ ಜಾಗ ಸಕ್ರಮ ಗೊಳಿಸಲು ಪರಂಬೊಕು ಶೀರ್ಷಿಕೆಯಿಂದ ವಿರಹಿತಗೊಳಿಸುವ ಕುರಿತು ಹಾಗೂ ಕುಂದಾಪುರ ಕಸಬಾ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಲ್ಲಿ ವಾಸ್ತವ್ಯವಿರುವ ಕುಟುಂಬ ಗಳಿಗೆ 94ಸಿ ಹಕ್ಕುಪತ್ರ ನೀಡುವಂತೆ ಮತ್ತು ಹೊಳೆಯಲ್ಲಿ ಹೂಳು ತುಂಬಿಕೊಂಡು ಮಳೆಗಾಲದಲ್ಲಿ ಕೃತಕ ನೆರೆಯಿಂದ ಕೃಷಿ ಮತ್ತು ಇತರೆ ಸ್ಥಳಗಳಿಗೆ ಹಾನಿ ಉಂಟಾಗಿದ್ದು ಈ ಬಗ್ಗೆ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿಯವರ ಬಳಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಶಾಸಕರು ಚರ್ಚಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News