×
Ad

ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆ ವಿತರಣೆ

Update: 2023-09-21 20:31 IST

ಉಡುಪಿ, ಸೆ.21: ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ಉಚಿತವಾಗಿ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮ ಸೆ.24ರಂದು ಬೆಳಗ್ಗೆ 11 ಗಂಟೆಗೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಸಮಾರಂಭದಲ್ಲಿ ಜಿಲ್ಲೆಯ ಶಾಸಕರು, ಸಂಸದರು, ಗಣ್ಯರು, ವಿವಿಧ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News