ಕುಂದಾಪುರ: ಉಚಿತ ಶ್ರವಣ ತಪಾಸಣೆ- ಶ್ರವಣ ಯಂತ್ರಗಳ ವಿತರಣೆ
ಕುಂದಾಪುರ: ಕುಂಭಾಸಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನ, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಮ್ ಈಶ್ವರ ಮಲ್ಪೆಇವರ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣಾ ಕಾರ್ಯಕ್ರಮವನ್ನು ಮಂಗಳವಾರ ಕುಂಭಾಸಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದ ಸಭಾಭವನದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ ಉದ್ಘಾಟಿಸಿದರು. ಸಮಾಜ ಸೇವಕ ಈಶ್ವರ ಮಲ್ಪೆಮಾತನಾಡಿದರು. ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅಧ್ಯಕ್ಷತೆ ವಹಿಸಿದ್ದರು.
ಸಂಘದ ಕೋಶಾಧಿಕಾರಿ ಲೋಕೇಶ್ ಆಚಾರ್, ಕುಂಭಾಸಿ ಗ್ರಾಪಂ ಸದಸ್ಯೆ ರಾಧಾದಾಸ್, ದೇವಸ್ಥಾನದ ವ್ಯವಸ್ಥಾಪಕ ನಟೇಶ್ ಕಾರಂತ್ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಮಾಜ ಸೇವಕ ಈಶ್ವರ ಮಲ್ಪೆಅವರನ್ನು ಸನ್ಮಾನಿಸಲಾಯಿತು. ಉಡುಪಿಯ ವಿಘ್ನಹರ್ತ ಸಂಸ್ಥೆಯ ಡಾ.ಅಂಕಿತಾ ಕಿವಿಯ ಶ್ರವಣ ತಪಾಸಣೆ ನಡೆಸಿದರು. ಶಿಬಿರದಲ್ಲಿ ೩೩ ಮಂದಿಯ ಶ್ರವಣದ ಪರೀಕ್ಷೆ ಮಾಡಿದ್ದು, ಎಂಟು ಮಂದಿ ಶ್ರವಣ ಸಾಧನದ ಪ್ರಯೋಜನ ಪಡೆದು ಕೊಂಡರು.
ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಎಸ್.ಬೀಜಾಡಿ ಸ್ವಾಗತಿಸಿದರು. ಈಶ್ವರ ಮಲ್ಪೆ ಟೀಮ್ ಸಂಚಾಲಕ ಲವ ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪತ್ರಕರ್ತರಾದ ಶ್ರೀಕಾಂತ್ ಹೆಮ್ಮಾಡಿ ಕಾರ್ಯಕ್ರಮ ನಿರ್ವಹಿಸಿ, ಪ್ರಶಾಂತ್ ಪಾದೆ ವಂದಿಸಿದರು.