×
Ad

ಬ್ರಹ್ಮಾವರ| ಜಿಲ್ಲಾ ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟಕ್ಕೆ ಚಾಲನೆ

Update: 2024-09-13 21:14 IST

ಬ್ರಹ್ಮಾವರ, ಸೆ.13: ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ವಲಯ ಹಾಗೂ ನಿರ್ಮಲ ಆಂಗ್ಲ ಮಾಧ್ಯಮ ಶಾಲೆ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಹ್ಯಾಂಡ್‌ಬಾಲ್ ಪಂದ್ಯಾಟಕ್ಕೆ ಬ್ರಹ್ಮಾವರದ ನಿರ್ಮಲ ಆಂಗ್ಲ ಮಾಧ್ಯಮ ಶಾಲೆಯ ಕ್ರೀಡಾಂಗಣದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.

ಪಂದ್ಯಾಟವನ್ನು ಉಡುಪಿ ಶಾಸಕ ಯಶಪಾಲ್ ಸುವರ್ಣ ಉದ್ಘಾಟಿಸಿ ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕ್ರೀಡೆಯಲ್ಲಿ ಸೋಲು ಗೆಲುವಿಗಿಂತ ಭಾಗವಹಿ ಸ್ಪರ್ಧಿಸುವುದು ಮುಖ್ಯ. ಎದುರಾಳಿ ತಂಡವನ್ನು ಸ್ನೇಹಿತರಂತೆ ಕಾಣಬೇಕು ಎಂದರು.

ವಂ. ವಿನ್ಸೆಂಟ್ ರೋಬೋಟ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಡಿಡಿಪಿಐ ಗಣಪತಿ ಕೆ., ಚಂದ್ರಶೇಖರ ಶೆಟ್ಟಿ, ಪದ್ಮಾವತಿ, ವಿಜಯಕುಮಾರ ಶೆಟ್ಟಿ, ಪ್ರಸನ್ನ ಕುಮಾರ ಶೆಟ್ಟಿ, ನಿರ್ಮಲ ಆಂಗ್ಲ ಮಾಧ್ಯಮ ಶಾಲೆಯ ಜಂಟಿ ಕಾರ್ಯದರ್ಶಿ ಗಳಾದ ವಂ. ಜಾನ್ ಫೆರ್ನಾಂಡಿಸ್, ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಕಾನುಕ, ಆಡಳಿತಾಧಿಕಾರಿ ವಂ.ಲೆನ್ಸನ್ ಲೋಬೊ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅರ್ಚನಾ ಅವರು ಅತಿಥಿಗಳನ್ನು ಸ್ವಾಗತಿಸಿದರೆ, ಕವಿತಾ ಕಾರ್ಯಕ್ರಮ ನಿರೂಪಿಸಿದರು. ಐರಿನ್ ಕೊನೆಯಲ್ಲಿ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News