ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ 

ಉಡುಪಿ : ಮುಂಬರುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿದಾರರು ಎಲ್ಇ-5ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆ ಪಡೆಯಲು ಸಾಕಷ್ಟು ಮುಂಚಿತವಾಗಿ ಎಇ-5 ನಮೂನೆಯನ್ನು ಜಿಲ್ಲಾಧಿಕಾರಿ ಕಚೇರಿಯಿಂದ ಪಡೆದು ತಾಲೂಕು ಮಟ್ಟದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವ ಪರವಾನಿಗೆ ನೀಡಲು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಸದ್ರಿ ಸಮಿತಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನಿರಾಕ್ಷೇಪಣಾ ಪತ್ರವನ್ನು ಪಡೆದು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಿದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆಯನ್ನು ನೀಡುವ ಬಗ್ಗೆ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಸ್ಫೋಟಕ ಕಾಯಿದೆ ಮತ್ತು ನಿಯಮ 2008ರ ಶೆಡ್ಯೂಲ್ - 4ರಡಿಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಈಗಾಗಲೇ ಸಮಿತಿಯು ನಿಗದಿಪಡಿಸಿರುವ ತೆರೆದ ಪ್ರದೇಶಗಳಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ನೀಡುವ ಬಗ್ಗೆ ಅರ್ಜಿಗಳನ್ನು ಜಿಲ್ಲಾಧಿಕಾರಿ ಕಚೇರಿಯಿಂದ ಪಡೆದು ಅಥವಾ ಆನ್ಲೈನ್ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 26 ಕೊನೆಯ ದಿನ.

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ 200 ರೂ. ಪರಿಶೀಲನಾ ಶುಲ್ಕವನ್ನು ಹಾಗೂ ಪರವಾನಿಗೆ ಮಂಜೂರು ಮಾಡುವ ಸಂದರ್ಭದಲ್ಲಿ 500 ರೂ. ಪರವಾನಿಗೆ ಶುಲ್ಕವನ್ನು ಪಾವತಿಸಬೇಕು.

ಅರ್ಜಿದಾರರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಅಗ್ನಿಶಾಮಕ ಇಲಾಖೆ, ಪೊಲೀಸ್ ಅಧೀಕ್ಷಕರ ಕಚೇರಿ, ಸಂಬಂಧಪಟ್ಟ ತಹಶೀಲ್ದಾರರ ಕಚೇರಿಯಿಂದ ಹಾಗೂ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಂದ ಪ್ರತ್ಯೇಕವಾಗಿ ನಿರಾಕ್ಷೇಪಣಾ ಪತ್ರ ಪಡೆದು ಸಲ್ಲಿಸಬೇಕು.

ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರ ಬಂದಲ್ಲಿ, ಸ್ಪೋಟಕ ಕಾಯಿದೆ ಮತ್ತು ನಿಯಮಗಳಡಿ ಜಿಲ್ಲಾಧಿಕಾರಿಗಳ ಕಛೇರಿಯಿಂದ ಪರವಾನಿಗೆ ಮಂಜೂರು ಮಾಡಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿ ಸಹ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor