×
Ad

ಅತ್ತೂರು ಬಸಿಲಿಕಾ ವಠಾರದಲ್ಲಿ ಕ್ರೈಸ್ತರಿಂದ ದೀಪಾವಳಿ ಆಚರಣೆ

Update: 2023-11-15 15:55 IST

ಕಾರ್ಕಳ, ನ.15: ಅತ್ತೂರಿನ ಪ್ರತಿಷ್ಠಿತ ಸಂತ ಲಾರೆನ್ಸರ ಬಸಿಲಿಕಾದ ಆವರಣ ಮತ್ತು ಮುಂಭಾಗದಲ್ಲಿ ಐಸಿವೈಎಂ ಯುವಕರು ಹಣತೆ ಹಚ್ಚುವ ಮೂಲಕ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಅತ್ತೂರು ಬಸಿಲಿಕಾದ ನಿರ್ದೇಶಕ ವ.ಫಾ.ಆಲ್ಬನ್ ಡಿಸೋಜ ಮತ್ತು ಫಾ. ಲ್ಯಾರಿ ಮಾರ್ಗದರ್ಶನದಲ್ಲಿ ಐಸಿವೈಎಂ ಸದಸ್ಯರು ಚರ್ಚ್ ಮುಂಭಾಗದಲ್ಲಿ ಮತ್ತು ಆವರಣದಲ್ಲಿ ಹಣತೆ ಹಚ್ಚಿ, ಸರ್ವಧರ್ಮದ ಯಶಸ್ವಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಪರಿಸರ ಸ್ನೇಹಿ ಸುಡುಮದ್ದು ಸಿಡಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಐಸಿವೈಎಂ ಸಲಹೆಗಾರ ರೋಷನ್, ಅಧ್ಯಕ್ಷ ಆರೋನ್ ಮತ್ತು ಯುವ ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News