×
Ad

ಅಧ್ಯಾಪಕ ಭೂಷಣ ಪ್ರಶಸ್ತಿಗೆ ಡಾ.ಮಂಜುನಾಥ್ ಕೋಟ್ಯಾನ್ ಆಯ್ಕೆ

Update: 2024-09-09 20:15 IST

ಕಾರ್ಕಳ, ಸೆ.9: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಶ್ವವಿದ್ಯಾನಿಲಯ ಘಟಕ ನೀಡುವ 2024ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿಗೆ ಕಾರ್ಕಳ ಶ್ರೀಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಎ.ಕೋಟ್ಯಾನ್ ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ ಜಿಲ್ಲೆಗಳ ಸಾಧಕ ಪ್ರಾಧ್ಯಾಪಕರ ಶೈಕ್ಷಣಿಕ ಸಾಧನೆ ಗುರುತಿಸಿ ಈ ಪ್ರಶಸ್ತಿ ನೀಡಲಾಗು ತ್ತಿದ್ದು ಈ ಬಾರಿ ಒಟ್ಟು 9 ಮಂದಿ ಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆ.15ರಂದು ಕಾರ್ಕಳ ಶ್ರೀಭುವನೇಂದ್ರ ಕಾಲೇಜಿನಲ್ಲಿ ನಡೆಯುವ ಪ್ರೇರಣಾ ದಿವಸ್ 2024 ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ ಅಧ್ಯಕ್ಷ ಪ್ರೊ.ಅನಿಲ್ ಸಹಸ್ರಬುದ್ದೆ ಪ್ರಶಸ್ತಿ ಪ್ರದಾನ ಮಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News