×
Ad

ರಾಜ್ಯಪಾಲರಿಂದ ಡಾ.ವಿದ್ಯಾಭೂಷಣರಿಗೆ ಡಾ.ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ

Update: 2023-10-10 12:44 IST

ಕೋಟ: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಇಲ್ಲಿನ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆದ ನಾಡಿನ ಖ್ಯಾತ ನಾಮ ಸಂಗೀತಗಾರ ಡಾ.ವಿದ್ಯಾಭೂಷಣ್ ಅವರಿಗೆ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಮಾಡಿದರು.

ಕೋಟತಟ್ಟು ಗ್ರಾ.ಪಂ., ಡಾ.ಶಿವರಾಮ ಕಾರಂತ ಟ್ರಸ್ಟ್, ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ಸಹಯೋಗದಲ್ಲಿ ಡಾ.ಶಿವರಾಮ ಕಾರಂತ ೧೨೧ನೇ ಜನ್ಮ ದಿನೋತ್ಸವ ಹಾಗೂ ಹುಟ್ಟೂರ ೧೯ನೇ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿದರು.

ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಗುರುರಾಜ್ ಗಂಟಿಹೊಳೆ, ಯಶಪಾಲ್ ಎ.ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ಕೋಟತಟ್ಟು ಗ್ರಾ.ಪಂ.ಅಧ್ಯಕ್ಷ ಸತೀಶ್ ಕುಂದರ್, ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯ ಯು.ಎಸ್.ಶೆಣೈ, ಕೋಟ ಡಾ.ಶಿರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ.ಕುಂದರ್ ಉಪಸ್ಥಿತರಿದ್ದರು.

ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ‌ ಸ್ವಾಗತಿಸಿದರು.ನರೇಂದ್ರ ಕೋಟ ನಿರೂಪಿಸಿದರು





 


 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News