×
Ad

ಶಿಕ್ಷಣ ಪ್ರೇಮಿ ವಿದ್ವಾನ್ ಶಂಭುದಾಸ್ ಗುರೂಜಿ ನಿಧನ

Update: 2023-11-01 19:37 IST

ಶಿರ್ವ, ನ.1: ಕುತ್ಯಾರು ಪರಶುರಾಮೇಶ್ವರ ಕ್ಷೇತ್ರ ಮತ್ತು ಕುತ್ಯಾರು ಸೂರ್ಯಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್‌ನ ಸಂಸ್ಥಾಪಕ, ಜೋತಿಷ್ಯ ವಿಶಾರದ ಕುತ್ಯಾರು ವಿದ್ವಾನ್ ಶಂಭುದಾಸ ಗುರೂಜಿ(79) ಮಂಗಳವಾರ ಬೆಳಗಿನ ಜಾವ ಸ್ವಗೃಹದಲ್ಲಿ ನಿಧನರಾದರು.

ಕೆಮಿಕಲ್ ಇಂಜಿನಿಯರ್ ಆಗಿ ಹಲವಾರು ವರ್ಷಗಳ ಕಾಲ ಬೆಂಗಳೂರಿನಲ್ಲಿ ಉದ್ಯಮಿ ಯಾಗಿದ್ದ ಅವರು ಬಾರ್ಕೂರಿನ ಕಚ್ಚೂರು ಶ್ರೀನಾಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸೇವಾ ಟ್ರಸ್ಟ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಶಿಕ್ಷಣ ಪ್ರೇಮಿಯಾಗಿ ಸಮಾಜದ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದರೊಂದಿಗೆ ಕುತ್ಯಾರು ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿದ್ದರು. ಮೃತರು ಪತ್ನಿ ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.

ಅವರ ನಿಧನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ, ಎಲ್ಲೂರು ಸೀಮೆಯ ಆಗಮ ವಿದ್ವಾಂಸ ಕುತ್ಯಾರು ಕೇಂಜ ಶ್ರೀಧರ ತಂತ್ರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಸಂತಾಪ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News