×
Ad

ಬಂಟ ಸಮುದಾಯದ ಮಕ್ಕಳಿಗೆ ತರಬೇತಿ ಕೇಂದ್ರ ಸ್ಥಾಪನೆ ಅಗತ್ಯ: ಜಯಪ್ರಕಾಶ್ ಹೆಗ್ಡೆ

Update: 2023-10-13 20:04 IST

ಉಡುಪಿ, ಅ.13: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಬಂಟ ಸಮುದಾಯದ ಯುವ ಜನತೆಗೆ ಐಎಎಸ್, ಐಪಿಎಸ್, ಕೆಎಎಸ್‌ ನಂತಹ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವ ನಿಟ್ಟಿನಲ್ಲಿ ತರಬೇತಿ ಕೇಂದ್ರವನ್ನು ಸ್ಥಾಪನೆ ಮಾಡು ವುದು ಇಂದಿನ ಅಗತ್ಯವಾಗಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅಭಿಪ್ರಾಯ ಪಟ್ಟಿದ್ದಾರೆ.

ಜಾಗತಿಕ ಬಂಟರ ಸಂಘಗಳ ಒಕ್ಕೂಟ ದ.ಕ ಮಂಗಳೂರು ವತಿಯಿಂದ ಉಡುಪಿಯಲ್ಲಿ ಅ.28 ಮತ್ತು 29ರಂದು ನಡೆಯ ಲಿರುವ ವಿಶ್ವ ಬಂಟರ ಸಮ್ಮೇಳನ-2023( ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ಸಂಭ್ರಮ) ಇದರ ಆಮಂತ್ರಣ ಪತ್ರಿಕೆ ಯನ್ನು ಶುಕ್ರವಾರ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡುತಿದ್ದರು.

ರಾಜ್ಯದ 3ಬಿ ಪಟ್ಟಿಯಲ್ಲಿ ಬಂಟರಿಗೂ ಮೀಸಲಾತಿ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಅರಿವಿನ ಕೊರತೆಯಿಂದ ಬಂಟ ಸಮುದಾಯದ ಮಕ್ಕಳು ಇದರಿಂದ ವಂಚಿತರಾಗಿದ್ದಾರೆ. ಆದುದರಿಂದ ತಮ್ಮ ಮಕ್ಕಳಿಗೆ ಈ ಬಗ್ಗೆ ತಿಳಿ ಹೇಳುವ ಕಾರ್ಯ ಮಾಡಬೇಕಾಗಿದೆ. ಇದರಿಂದ ಅವರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕೆ ಬಹಳಷ್ಟು ಸಹಾಯವಾಗುತ್ತದೆ ಎಂದರು.

ಮುಂಬೈ ಸೇರಿದಂತೆ ಜಗತ್ತಿನ ಬೇರೆ ಬೇರೆ ಕಡೆಗಳಲ್ಲಿರುವ ಬಂಟ ಸಮು ದಾಯದ ಉದ್ಯಮಿಗಳು ಊರಿನಲ್ಲಿ ಬೃಹತ್ ಉದ್ಯಮಗಳನ್ನು ಸ್ಥಾಪಿಸಲು ಯೋಜನೆ ರೂಪಿಸಬೇಕು. ಇದರಿಂದ ಸಮುದಾಯದ ಯುವಜನತೆಗೆ ಉದ್ಯೋಗ ಕಲ್ಪಿಸಲು ಅನುಕೂಲವಾಗುತ್ತದೆ ಎಂದ ಅವರು, ಸಮುದಾಯದ ವಿದ್ಯಾರ್ಥಿಗಳು ಸರಕಾರಿ ಉದ್ಯೋಗ ಪಡೆಯಲು ಹೆಚ್ಚಿನ ಆಸಕ್ತಿ ತೋರಬೇಕು ಎಂದು ಸಲಹೆ ನೀಡಿದರು.

ವೇದಿಕೆಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ವಿಶ್ವ ಬಂಟರ ಸಂಘದ ಸಂಚಾಲಕ ಶಿವಪ್ರಸಾದ್ ಹೆಗ್ಡೆ, ಉಪ ಸಂಚಾಲಕ ದಿನೇಶ್ ಹೆಗ್ಡೆ, ನಿಕಟಪೂರ್ವ ಅಧ್ಯಕ್ಷ ಜಯರಾಜ್ ಹೆಗ್ಡೆ, ಪೋಷಕರಾದ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಚಂದ್ರಹಾಸ್ ಶೆಟ್ಟಿ, ಡಾ.ರೋಶನ್ ಕುಮಾರ್ ಶೆಟ್ಟಿ, ಪುರುಷೋತ್ತಮ್ ಪಿ.ಶೆಟ್ಟಿ, ಆರೂರು ಶ್ರೀಧರ್ ಶೆಟ್ಟಿ, ಸುಧೀರ್ ಕುಮಾರ್ ಶೆಟ್ಟಿ, ಮನೋಹರ್ ಎಸ್.ಶೆಟ್ಟಿ, ದಿವಾಕರ್ ಶೆಟ್ಟಿ ಕೊಡವೂರು, ಮಟ್ಟಾರ್ ರತ್ನಾಕರ್ ಹೆಗ್ಡೆ, ಡಾ.ಭಾಸ್ಕರ್ ಶೆಟ್ಟಿ ಬೆಳ್ಳೆ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ, ನವೀನ್‌ಚಂದ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯ ದರ್ಶಿ ಇಂದ್ರಾಳಿ ಜಯಕರ್ ಶೆಟ್ಟಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಸತೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News