ಪ್ರತಿಯೊಬ್ಬರೂ ಚಾಲ್ತಿಯಲ್ಲಿರುವ ಆಧಾರ್ ಕಾರ್ಡ್ ಹೊಂದಿರಬೇಕು: ಉಡುಪಿ ಡಿಸಿ ವಿದ್ಯಾಕುಮಾರಿ
ಉಡುಪಿ: ಇಂದು ಪ್ರತಿಯೊಬ್ಬ ನಾಗರಿಕನ ದೈನಂದಿನ ಬದುಕಿನಲ್ಲಿ ಆಧಾರ್ ಕಾರ್ಡ್ ಮಹತ್ವದ ಸ್ಥಾನ ಹೊಂದಿದೆ. ವ್ಯಕ್ತಿಯನ್ನು ಗುರುತಿ ಸುವುದರಿಂದ ತೊಡಗಿ ಸರಕಾರಗಳ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಆಧಾರ್ ಕಡ್ಡಾಯವಾಗಿದ್ದು, ಆದ್ದರಿಂದ ಪ್ರತಿಯೊಬ್ಬರೂ ಚಾಲ್ತಿಯಲ್ಲಿರುವ ಆಧಾರ್ ಗುರುತಿನ ಚೀಟಿ ಹೊಂದಿರಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.
ಗುರುವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಜಿಲ್ಲಾ ಮಟ್ಟದ ಆಧಾರ್ ಮಾನಿಟ ರಿಂಗ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಭಾರತದ ಪ್ರತಿಯೊಬ್ಬ ಅರ್ಹ ನಾಗರಿಕರಿಗೆ ವಿಶಿಷ್ಟ ಗುರುತಿನ ಚೀಟಿಯನ್ನು ನೀಡಲಾಗುತ್ತಿದೆ. ಜಿಲ್ಲೆಯ ಎಲ್ಲಾ ವಯೋಮಾ ನದವರಿಗೂ ಹೊಸಕಾರ್ಡ್ ಗಳು, ಕಾರ್ಡುಗಳ ಸ್ಯಾಚುರೇಷನ್ ಹಾಗೂ ಕಡ್ಡಾಯ ಬಯೋಮೆಟ್ರಿಕ್ ನವೀಕರಣಗೊಳಿಸುವು ದರೊಂದಿಗೆ ಎಲ್ಲಾ ವಯೋಮಾನದವರೂ ಚಾಲ್ತಿಯ ಲ್ಲಿರುವ ಆಧಾರ್ ಕಾರ್ಡ್‌ನ್ನು ಹೊಂದಿರಬೇಕು ಎಂದವರು ತಿಳಿಸಿದರು.
5 ವಷರ್ದೊಳಗಿನ ಮಕ್ಕಳು ಹೊಸದಾಗಿ ಆಧಾರ್ ಕಾರ್ಡ್ ನೊಂದಣಿಯನ್ನು ಸಮೀಪದ ಅಂಚೆ ಕಚೇರಿ, ತಾಲೂಕು ಕಚೇರಿ ಅಥವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ಇದರ ಪ್ರಯೋಜನವನ್ನು ಪ್ರತಿ ಯೊಬ್ಬರು ಅಗತ್ಯವಾಗಿ ಪಡೆದುಕೊಳ್ಳಬೇಕು ಎಂದರು.
ಕಾರ್ಡ್‌ನ ನವೀಕರಣ: 10 ವರ್ಷ ಅಥವಾ ಅದಕ್ಕಿಂತ ಹಿಂದೆ ಆಧಾರ್ ನೋಂದಣಿ ಮಾಡಿಕೊಂಡ ಪ್ರತಿಯೊಬ್ಬರು ಗುರು ತಿನ ಹಾಗೂ ವಿಳಾಸ ದಾಖಲೆಯೊಂದಿಗೆ ಸಮೀಪದ ಆಧಾರ್ ಕೇಂದ್ರದಲ್ಲಿ ಮರು ಅಪ್ಲೋಡ್ ಮಾಡಿ ಹೊಸದಾಗಿ ನೊಂದಣಿ ಮಾಡಿಕೊಳ್ಳಬೇಕು. ಆಧಾರ್ ಕಾರ್ಡ್‌ನ್ನು - myAadhaar.uidai.gov.in. portal-ನಲ್ಲಿ ಆನ್‌ಲೈನ್ ಮೂಲಕ ನೇರ ವಾಗಿ ನವೀಕರಿಸಲು ಅವಕಾಶವಿದೆ. ಇದರ ಉಪಯೋಗ ಪಡೆದು ಕೊಳ್ಳಬೇಕು. ಒಂದೊಮ್ಮೆ ನವೀಕ ರಿಸದೆ ಇದ್ದಲ್ಲಿ ಆಧಾರ್ ಕಾರ್ಡ್ ನಿಷ್ಕೃಿಯಗೊಳ್ಳುತ್ತದೆ. ಇದರಿಂದ ನಿಮಗೆ ಯಾವುದೇ ಸೌಲಭ್ಯ ಅಥವಾ ಸೇವೆ ಪಡೆಯಲು ಸಾಧ್ಯವಾಗುವುದಿಲ್ಲ ಎಂದವರು ಹೇಳಿದರು.
ಬಯೋಮೆಟ್ರಿಕ್: ಆಧಾರ್ ನೊಂದಣಿಗೊಂಡು 15 ವಷರ್ ಆಗಿದ್ದರೆ, ಕಡ್ಡಾಯವಾಗಿ ಆಧಾರ್ ಬಯೋಮೆಟ್ರಿಕ್ ನವೀಕರಣ ಮಾಡಿಸಿಕೊಳ್ಳಬೇಕು. ಇದು ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ 5 ವಷರ್ ಮೇಲ್ಪಟ್ಟವರು 43,437 ಮಂದಿ, 15 ವರ್ಷ ಮೇಲ್ಪಟ್ಟ 44,481 ಮಂದಿ ಸೇರಿದಂತೆ ಒಟ್ಟು 87,918 ಮಂದಿ ತಮ್ಮ ಆಧಾರ್ ಕಾರ್ಡ್‌ನ್ನು ನವೀಕರಿಸಿಕೊಳ್ಳಲು ಹಾಕಿ ಇದ್ದಾರೆ ಎಂದು ಡಾ.ವಿದ್ಯಾಕುಮಾರಿ ತಿಳಿಸಿದರು.
ರಾಜ್ಯ ಆಧಾರ್ ನೋಂದಣಿ ಪ್ರಾಧಿಕಾರವು ಜಿಲ್ಲೆಯ ಆಯ್ದ ಬ್ಯಾಂಕ್‌ಗಳು, ಅಂಚೆ ಕಚೇರಿಗಳಲ್ಲಿ ಆಧಾರ್ ನೋಂದಣಿ ಕೇಂದ್ರ ಗಳನ್ನು ತೆರೆಯಲು ಅದೇಶಿಸಿದ್ದು, ಅದರಂತೆ ಪ್ರತಿಯೊಂದು ಆಧಾರ್ ನೋಂದಣಿ ಕೇಂದ್ರವನ್ನು ಸೂಚಿಸಿದ ಕಚೇರಿ ಸಮಯದಲ್ಲಿ ತೆರೆದು ಸಾರ್ವಜನಿಕರಿಗೆ ಆಧಾರ್ ಸೇವೆ ಪಡೆಯಲು ಅನುವು ಮಾಡಿಕೊಡಬೇಕು ಎಂದರು.
ಆಧಾರ್ ಕಾರ್ಡ್ ಹೊಂದಿದವರು ಮರಣ ಹೊಂದಿದ್ದಲ್ಲಿ ಅವರ ಕಾನೂನು ಬದ್ಧ ವಾರಸುದಾರರು ಅವರ ಮರಣ ಪ್ರಮಾಣ ಪತ್ರವನ್ನು ನೀಡಿ, ಆಧಾರ್ ಕಾರ್ಡ್ ಅನ್ನು ತಪ್ಪದೇ ರದ್ದುಪಡಿಸಬೇಕು. ರದ್ದುಪಡಿಸದೇ ಇದ್ದಲ್ಲಿ ಕಾನೂನು ಬಾಹಿರ ಚಟುವಟಿಕೆ ಗಳಲ್ಲಿ ಇದರ ಉಪಯೋಗ ಪಡೆದು ಕೊಳ್ಳುವ ಸಾಧ್ಯತೆಗಳಿದ್ದು, ಈ ರೀತಿ ಆದಲ್ಲಿ ಕಾನೂನುಬದ್ಧ ವಾರಸು ದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರತಿಯೊಬ್ಬ ನಾಗರಿಕನು ತಮ್ಮ ದಾಖಲೆಗಳನ್ನು ನೀಡಿ ಆಧಾರ್ ಕಾರ್ಡ್ ಅನ್ನು ನವೀಕರಿಸಲು ಉತ್ತೇಜಿಸುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು ಎಂದ ಅವರು, ಹೊಸದಾಗಿ ಆಧಾರ್ ಕಾರ್ಡ್ ಮಾಡಿಸಲು ಹಾಗೂ ದಾಖಲೆ ಗಳನ್ನು ಅಪ್ಲೋಡ್ ಮಾಡಲು ಅನುಕೂಲ ವಾಗುವಂತೆ ವಿಶೇಷ ಶಿಬಿರಗಳನ್ನು ಶಾಲಾ-ಕಾಲೇಜು, ಅಂಗನವಾಡಿಗಳಲ್ಲಿ ಏರ್ಪಡಿಸಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಯು.ಐ.ಡಿ.ಎ.ಐ ಡೈರೆಕ್ಟರ್ ಮನೋಜ್ ಕುಮಾರ್, ಯು.ಐ.ಡಿ.ಎ.ಐ ಅಸಿಸ್ಟೆಂಟ್ ಮ್ಯಾನೇಜರ್ ಮೊಹಮ್ಮದ್ ಮೂಸಾಬ್, ರಿಕೇಶ್, ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ಎಎಸ್‌ಪಿ ಸಿದ್ಧಲಿಂಗಪ್ಪ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಡಿಡಿಪಿಯು ಗಣಪತಿ, ಡಿಡಿಪಿಐ ಮಾರುತಿ, ಐ.ಟಿ.ಡಿ.ಪಿ ಯೋಜನಾ ಸಮನ್ಯಾಧಿಕಾರಿ ನಾರಾಯಣ ಸ್ವಾಮಿ ಹಾಗೂಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯಲ್ಲಿ 14,12,357 ಆಧಾರ್ ನೊಂದಣಿ
ಜಿಲ್ಲೆಯಲ್ಲಿ ಈವರೆಗೆ 14,12,357 ಮಂದಿ ಆಧಾರ್ ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 5 ವರ್ಷದೊಳಗಿನ 37,700, 5ರಿಂದ 18 ವರ್ಷದೊಳಗಿನವರು 2,06,567 ಮಂದಿ ಹಾಗೂ 18 ವಷರ್ ಮೇಲ್ಪಟ್ಟವರು ಒಟ್ಟು 11,73,090 ಮಂದಿ ಇದ್ದಾರೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.