×
Ad

ಅ.4ರಂದು ಉಡುಪಿ ಜಿಲ್ಲಾ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿ ಸಭೆ: ವೀಕ್ಷಕ ಸಚಿವ ಮಾಂಕಾಳ ವೈದ್ಯ ಭಾಗಿ

Update: 2023-10-03 19:31 IST

ಉಡುಪಿ, ಅ.3: ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯು ಬುಧವಾರ ಅ.4ರಂದು ಬೆಳಗ್ಗೆ 10:00 ಗಂಟೆಗೆ ಕೋಟೇಶ್ವರದ ಸಹನಾ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವೀಕ್ಷಕರಾಗಿ ನಿಯುಕ್ತಿಗೊಂಡಿರುವ ರಾಜ್ಯ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯರು ಭಾಗವಹಿಸಲಿದ್ದಾರೆ.

ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ, ಮಾಜಿ ಸಚಿವ ವಿನಯ್‌ಕುಮಾರ ಸೊರಕೆ, ಮಾಜಿ ಶಾಸಕ ಗೋಪಾಲ್ ಪೂಜಾರಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧಿಸಿದ ಮುಖಂಡರಾದ ಪ್ರಸಾದ್‌ ರಾಜ್ ಕಾಂಚನ್, ಉದಯಕುಮಾರ ಶೆಟ್ಟಿ ಮುನಿಯಾಲು, ದಿನೇಶ್ ಹೆಗ್ಡೆ ಮೊಳಹಳ್ಳಿ ಉಪಸ್ಥಿತರಿರುವರು.

ಅಲ್ಲದೇ ಜಿಲ್ಲೆಯ 10 ಬ್ಲಾಕ್‌ಗಳ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರು, ಕೆಪಿಸಿಸಿ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಸಭೆಯಲ್ಲಿ ಭಾಗವಹಿಸುವರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News