ಮಡಗಾಂವ್- ಮಂಗಳೂರು ವಂದೇ ಭಾರತ್ ರೈಲು ಬೆಂಗಳೂರಿಗೆ ವಿಸ್ತರಣೆ
ಉಡುಪಿ: ಮಂಗಳೂರು-ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರಿನವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಿಂದ ಮಂಗಳೂರು-ಮಡಗಾಂವ್ ನಡುವೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆರಂಭಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು 2025ರ ನವೆಂಬರ್ 12, 2026ರ ಜೂನ್ 6 ಹಾಗೂ ಆಗಸ್ಟ್ 10ರಂದು ಕೇಂದ್ರ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವರು, ಪ್ರಸ್ತುತ ಮಡಗಾಂವ್-ಮಂಗಳೂರು ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಉಡುಪಿ, ಕುಂದಾಪುರ ಹಾಗೂ ಕಾರವಾರ ಮಾರ್ಗವಾಗಿ ಬೆಂಗಳೂರಿನವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಮುಂದೆ ಈ ರೈಲು 26655/26656 ಯಶವಂತಪುರ-ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ಹೆಸರಿನಲ್ಲಿ ಪರಿಷ್ಕೃತ ವೇಳಾಪಟ್ಟಿಯೊಂದಿಗೆ ಸಂಚರಿಸಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.