×
Ad

ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೆಸರಿನಲ್ಲಿ ನಕಲಿ ಖಾತೆ

Update: 2026-01-15 20:03 IST

ಸ್ವರೂಪ ಟಿ.ಕೆ.

ಉಡುಪಿ, ಜ.15: ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ ಹಾಗೂ ವಾಟ್ಯ್ಸಾಪ್‌ಗಳಲ್ಲಿ ತನ್ನ ಫೋಟೋ ಹಾಗೂ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಕಲಿ ಖಾತೆಗಳನ್ನು ಸೃಷ್ಟಿಸುವ ಮೂಲಕ, ಬೇರೆ ಬೇರೆ ಕಾರಣಗಳನ್ನು ನೀಡಿ ಹಣಕ್ಕೆ ಬೇಡಿಕೆ ಇಡುತ್ತಿರುವುದು ತನ್ನ ಗಮನಕ್ಕೆ ಬಂದಿರುವುದಾಗಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆದು ಬೇರೆ ಬೇರೆ ಕಾರಣಗಳಿಗೆ ಹಣ ವರ್ಗಾಯಿಸುವಂತೆ ಸಂದೇಶಗಳನ್ನು ರವಾನಿಸುತ್ತಿರುವುದು ಗೊತ್ತಾಗಿದೆ. ಈ ಬಗ್ಗೆ ಈಗಾಗಲೇ ಕಾನೂನು ಕ್ರಮಕೈಗೊಳ್ಳುವಂತೆ ಉಡುಪಿಯ ಸೆನ್ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಲಾಗಿದೆ.

ಅದಾಗ್ಯೂ ಇಂತಹ ಪ್ರಕರಣ ಪುನರಾವರ್ತನೆಯಾಗುತ್ತಿರುವುದರಿಂದ ಫೇಸ್ಬುಕ್ ಹಾಗೂ ವಾಟ್ಯ್ಸಾಪ್‌ಗಳಲ್ಲಿ ನನ್ನ ಫೋಟೋ ಹಾಗೂ ಹೆಸರನ್ನು ಬಳಸಿ ಹಣ ವರ್ಗಾವಣೆಗೆ ಅಥವಾ ಇನ್ನಿತರೆ ಬೇಡಿಕೆಗಳ ಸಂದೇಶಗಳು ಸ್ವೀಕೃತ ವಾದಲ್ಲಿ, ಅಂತಹ ಸಂದೇಶಗಳಿಗೆ ಸ್ಪಂದಿಸದೆ, ಸಂದೇಶ ಸ್ವೀಕೃತವಾದ ತಕ್ಷಣ ಸೆನ್ ಪೊಲೀಸ್ ಠಾಣೆಗೆ ದೂರು ನೀಡುವಂತೆ ಎಲ್ಲಾ ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಸ್ವರೂಪ ಟಿ.ಕೆ. ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News