×
Ad

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

Update: 2026-01-16 21:40 IST

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಯನ್ನು ಕಲ್ಪಿಸುವ ದೃಷ್ಟಿಯಿಂದ ಈಗಾಗಲೇ ಉಡುಪಿ ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ನಿಷೇಧ, ಬದಲಿ ಮಾರ್ಗ ಮತ್ತು ಪಾರ್ಕಿಂಗ್ ನಿಷೇಧ ಕುರಿತು ಅಧಿಸೂಚನೆ ಹೊರಡಿಸಲಾಗಿದೆ.

ಕಾರ್ಕಳ-ಮಣಿಪಾಲ ಕಡೆಯಿಂದ ಉಡುಪಿ ನಗರಕ್ಕೆ ಬರುವ ವಾಹನ ಗಳಿಗೆ ಈ ಕೆಳಕಂಡ ಮಾರ್ಗದಲ್ಲಿ ಸಂಚರಿ ಸುವ ಬಗ್ಗೆ ಪರಿಷ್ಕರಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಸೂಚನೆ ಹೊರಡಿಸಿದ್ದಾರೆ.

ಕಾರ್ಕಳ-ಮಣಿಪಾಲ ಕಡೆಯಿಂದ ಉಡುಪಿ ನಗರಕ್ಕೆ ಬರುವ ವಾಹನಗಳು: ಜ.17ರ ಸಂಜೆ 7 ಗಂಟೆಯ ತನಕ ಕಾರ್ಕಳ, ಮಣಿಪಾಲಕ್ಕೆ ಹೋಗಿ ಬರುವ ವಾಹನಗಳು ನೇರವಾಗಿ ಕಲ್ಸಂಕ ಮಾರ್ಗವಾಗಿ ಉಡುಪಿ ಸಿಟಿ, ಸರ್ವಿಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸಬೇಕು. ಉಡುಪಿ ನಗರಕ್ಕೆ ಸಂಜೆ 7ರಿಂದ ಮರುದಿನ ಬೆಳಗ್ಗೆ 7ರವರೆಗೆ ಎಲ್ಲಾ ವಾಹನಗಳು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.

ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯ ತನಕ ಮಣಿಪಾಲ ಸಿಂಡಿಕೇಟ್ ಸರ್ಕಲ್‌ನಿಂದ ಲಕ್ಷ್ಮೀಂದ್ರ ನಗರ, ಸಗ್ರಿ ನೊಳೆ ರಸ್ತೆಯಿಂದಾಗಿ ಪೆರಂಪಳ್ಳಿ ಭಾರತೀಯ ಆಹಾರ ನಿಗಮದ ಮುಂಭಾಗದಿಂದ ಅಂಬಾಗಿಲು ಜಂಕ್ಷನ್ ಮೂಲಕ ರಾ.ಹೆ.66ನ್ನು ಸಂಪರ್ಕಿಸಿ, ಅಂಬಾಗಿಲು, ನಿಟ್ಟೂರು ಮಾರ್ಗವಾಗಿ ಕರಾವಳಿ ಜಂಕ್ಷನ್‌ಗೆ ಆಗಮಿಸಬೇಕು.

ಕರಾವಳಿ ಜಂಕ್ಷನ್ ಅಂತಿಮ ನಿಲುಗಡೆಯಾಗಿದ್ದು, ಅಲ್ಲಿಂದಲೇ ಪ್ರಯಾಣಿ ಕರನ್ನು ಕರೆದುಕೊಂಡು ವಾಪಾಸು ನಿಟ್ಟೂರು, ಅಂಬಾಗಿಲು, ಪೆರಂಪಳ್ಳಿ ಮಾರ್ಗವಾಗಿ ಪೆರಂಪಳ್ಳಿ ಭಾರತೀಯ ಆಹಾರ ನಿಗಮದ ಮುಂಭಾಗದಿಂದ ಸಗ್ರಿನೊಳೆ, ಲಕ್ಷ್ಮೀಂದ್ರ ನಗರ, ಸಿಂಡಿಕೇಟ್ ಸರ್ಕಲ್ ಮೂಲಕ ಮಣಿಪಾಲ, ಕಾರ್ಕಳ ಕಡೆಗೆ ಹೋಗಬೇಕು.

ಈ ಮಾರ್ಗವನ್ನು ಹೊರತುಪಡಿಸಿ ಉಳಿದ ಮಾರ್ಗಗಳ ವಾಹನ ಸಂಚಾರ ನಿಷೇಧ ಬದಲಿ ಮಾರ್ಗ ಹಾಗೂ ಪಾರ್ಕಿಂಗ್ ನಿಷೇದದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಪರ್ಯಾಯ ಮಹೋತ್ಸವ: ಮದ್ಯ ಮಾರಾಟ ನಿಷೇಧ

 ಉಡುಪಿ ಶ್ರೀಕೃಷ್ಣ ಮಠದಲ್ಲಿ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥರ ಪರ್ಯಾಯೋತ್ಸವದ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ದೇಶೀಯ ಮದ್ಯ ಮಾರಾಟ) ನಿಯಮಗಳಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆಯಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹಾಗೂ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಾದ ಉದ್ಯಾವರ, ಕೊರಂಗ್ರಪಾಡಿ, ಅಲೆವೂರು, ಹಿರೇಬೆಟ್ಟು, ಅಂಬಲಪಾಡಿ, ಕುತ್ಪಾಡಿ, ಕಡೆಕಾರು, ಕಿದಿಯೂರು, ಮೂಡುತೋನ್ಸೆ ಹಾಗೂ ಪಡು ತೋನ್ಸೆ ಗ್ರಾಮ ವ್ಯಾಪ್ತಿಯಲ್ಲಿ ಜನವರಿ 17ರ ಬೆಳಗ್ಗೆ 10 ರಿಂದ ಜ.18ರ ಸಂಜೆ 6 ಗಂಟೆಯವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್,ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಮದ್ಯ ಮಾರಾಟ ವನ್ನು ನಿಷೇಧಿಸಿ, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಲಾಗಿದೆ.

ಮೇಲ್ಕಂಡ ಪ್ರದೇಶಗಳ ವ್ಯಾಪ್ತಿಯಲ್ಲಿ ಈ ಅವಧಿಯನ್ನು ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News