×
Ad

ದೊಡ್ಡಣಗುಡ್ಡೆ: ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ

Update: 2024-09-23 08:58 IST

ಉಡುಪಿ: ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಆಕಸ್ಮಿಕ ಬೆಂಕಿ ಅವಗಡ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್  ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದೆ. ರಿನೋವೇಷನ್ ಆಗುತ್ತಿದ್ದುದರಿಂದ ರೋಗಿಗಳು ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ.

ಬೆಳಗ್ಗೆ ದೈನಂದಿನ ಕೆಲಸಕ್ಕೆ ಬರುವ ಮಹಿಳೆಯೊಬ್ಬರು ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭಿಸುವಾಗ ಹಾಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿರುವ ಉಡುಪಿ ಅಗ್ನಿಶಾಮಕ ದಳದ ತಂಡ ಎರಡು ಫೈರ್ ವಾಹನಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News