ಕುಂದಾಪುರ : ಕುಂದಾಪುರದ ಸ್ಮಾರ್ಟ್ ಬಜಾರ್‌ನಲ್ಲಿ ರವಿವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

ಸ್ಮಾರ್ಟ್ ಬಜಾರ್ ಇರುವ ಕಟ್ಟಡದ ಮುಖ್ಯ ಜನರೇಟರ್‌ನಲ್ಲಿ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಇದರಿಂದ ಇಡೀ ಬಜಾರ್ ಒಳಗೆ ಹೊಗೆ ತುಂಬಿತ್ತು. ಇದರಿಂದ ಕೆಲ ಕಾಲ ಆತಂಕ ಸೃಷ್ಠಿಯಾಗಿತ್ತು. ತಕ್ಷಣ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕುಂದಾಪುರ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor