×
Ad

ಆವಿಷ್ಕಾರ್: ಬಂಟಕಲ್ ವಿದ್ಯಾರ್ಥಿಗಳಿಗೆ ಪ್ರಥಮ ಪ್ರಶಸ್ತಿ

Update: 2024-10-23 17:52 IST

ಶಿರ್ವ: ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದ ಗಣಕಯಂತ್ರ ವಿಭಾಗದ 3ನೇ ವರ್ಷದ ವಿದ್ಯಾರ್ಥಿಗಳಾದ ಪ್ರಿನ್ಸಿಯಾ ಡಿ ಅಲ್ಮೇಡಾ ಮತ್ತು ಪ್ರೇರಣಾ ಶೆಟ್ಟಿ ಅ.18ರಂದು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸುರತ್ಕಲ್ ಇಲ್ಲಿ ನಡೆದ ಅಂತರ್ ಕಾಲೇಜು ಐಡಿಯಾ ಪಿಚಿಂಗ್ ಸ್ಪರ್ಧೆ ಆವಿಷ್ಕಾರ್‌ನಲ್ಲಿ ಪ್ರಥಮ ಸ್ಥಾನಗಳಿಸಿದೆ.

ವಾರ್ಷಿಕ ತಾಂತ್ರಿಕ ಹಬ್ಬದ ಅಂಗವಾಗಿ ನಡೆದ ಈ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದ ವಿವಿಧ ಇಂಜಿನಿಯರಿಂಗ್ ಕಾಲೇಜಿನ ಒಟ್ಟು 19 ತಂಡಗಳು ಭಾಗವಹಿಸಿದ್ದವು. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News