×
Ad

ದೋಣಿಯಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

Update: 2025-12-18 21:14 IST

ಬೈಂದೂರು, ಡಿ.18: ಉಪ್ಪುಂದ ಗ್ರಾಮದ ಮಡಿಕಲ್ ಬಳಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯಿಂದ ಮೀನುಗಾರ ರೊಬ್ಬರು ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಹರಿಶ್ಚಂದ್ರ ಖಾರ್ವಿ ಎಂದು ಗುರುತಿಸಲಾಗಿದೆ. ಇವರು ಮಹಾಸತಿ ದೋಣಿಯಲ್ಲಿ ಇತರ ಮೀನುಗಾರರೊಂದಿಗೆ ಡಿ.15ರಂದು ಸಂಜೆ ಮೀನುಗಾರಿಕೆಗೆ ತೆರಳಿದ್ದು, ಸಮುದ್ರ ಮಧ್ಯೆ ಮೀನುಗಾರಿಕೆ ಮಾಡುತ್ತಿದ್ದಾಗ ಹರಿಶ್ಚಂದ್ರ ಖಾರ್ವಿ ದೋಣಿಯಿಂದ ಆಯತಪ್ಪಿ ನೀರಿಗೆ ಬಿದ್ದರೆನ್ನಲಾಗಿದೆ. ಕೂಡಲೇ ಅವರನ್ನು ಇತರ ಮೀನುಗಾರರು ನೀರಿನಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದರು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಇವರು ಡಿ.18ರಂದು ಬೆಳಗ್ಗೆ ಇವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News