×
Ad

ಐವರು ರಂಗಕರ್ಮಿಗಳಿಗೆ ‘ಮಲಬಾರ್ ವಿಶ್ವರಂಗ ಪುರಸ್ಕಾರ’ ಪ್ರದಾನ

Update: 2025-03-26 18:37 IST

ಉಡುಪಿ: ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ವಿಶ್ವರಂಗಭೂಮಿ ದಿನಾಚರಣೆಯ ಪ್ರಯುಕ್ತ ಆರನೇ ವರ್ಷದ ‘ಮಲಬಾರ್ ವಿಶ್ವರಂಗ ಪುರಸ್ಕಾರ ೨೦೨೫’ನ್ನು ಐವರು ಹಿರಿಯ ರಂಗಕರ್ಮಿಗಳಿಗೆ ಇಂದು ಪ್ರದಾನ ಮಾಡಲಾಯಿತು.

ಮಲಬಾರ್ ಗೋಲ್ಡ್ ಉಡುಪಿ ಶಾಖೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಗ ನಟ, ನಿರ್ದೇಶಕ ಅರವಿಂದ ಕುಲಕರ್ಣಿ ಧಾರವಾಡ, ರಂಗ ಸಂಘಟಕ ಹಾಗೂ ನಿರ್ದೇಶಕ ಗಣೇಶ್ ಕಾರಂತ್ ಬೈಂದೂರು, ರಂಗನಟಿ, ಕಂಠದಾನ ಕಲಾವಿದೆ ಪ್ರಿಯಾ ಸರೋಜಾ ದೇವಿ ಮುಂಬೈ, ರಂಗನಟ ಪ್ರಕಾಶ್ ಜಿ.ಕೊಡವೂರು, ರಂಗನಟಿ ಮಂಜುಳಾ ಜನಾರ್ದನ್ ಮಂಗಳೂರು ಅವರಿಗೆ ಪ್ರಶಸ್ತಿ ಪತ್ರ, ಫಲಕ, ನಗದು ಹಾಗೂ ಬೆಳ್ಳಿ ಪದಕದೊಂದಿಗೆ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು.

ಅಧ್ಯಕ್ಷತೆಯನ್ನು ಉಡುಪಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದಂತ ವೈದ್ಯ ಡಾ.ವಿಜಯೇಂದ್ರ ರಾವ್, ಉದ್ಯಮಿ ಸುಗುಣ ಸುವರ್ಣ ಮಾತನಾಡಿದರು. ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಶಂಕರ್, ಗೌರವಾಧ್ಯಕ್ಷ ಯು.ವಿಶ್ವನಾಥ ಶೆಣೈ,ಮಲಬಾರ್ ಗೋಲ್ಡ್ ಉಡುಪಿ ಶಾಖೆ ಮುಖ್ಯಸ್ಥ ಹಫೀಝ್ ರೆಹಮಾನ್ ಉಪಸ್ಥಿತರಿದ್ದರು.

ಯುವ ಸಂಚಯದ ಬೀದಿ ನಾಟಕ ತಂಡವನ್ನು ಗೌರವಿಸಲಾಯಿತು. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜೋಶಿ ಸ್ವಾಗತಿಸಿದರು. ಸಂಧ್ಯಾ ಶೆಣೈ ವಂದಿಸಿದರು. ರಾಜೇಶ್ ಭಟ್ ಪಣಿಯಾಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಕ್ಕೆ ಮೊದಲು ಸ್ವಸ್ತಿಶ್ರೀ ಅವರಿಂದ ಭರತ ನೃತ್ಯ ಕಾರ್ಯಕ್ರಮ ಜರಗಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News