×
Ad

ಅರಣ್ಯ ಇಲಾಖೆಯ ವಾಚ್‌ಮೆನ್ ಆತ್ಮಹತ್ಯೆ

Update: 2025-07-24 21:50 IST

ಕಾರ್ಕಳ, ಜು.24: ಅರಣ್ಯ ಇಲಾಖೆಯಲ್ಲಿ ವಾಚ್‌ಮೆನ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಕಾರ್ಕಳ ಅನಂತಶಯನ ನಿವಾಸಿ ವೇದವ್ಯಾಸ(50) ಎಂಬವರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.

ಇವರು ಅನಾರೋಗ್ಯದಿಂದ ಮನನೊಂದು ಮಾ.3ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಜು.24ರಂದು ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News