×
Ad

ಕೋಟ| ನಕಲಿ ಐಟಿ ದಾಳಿ ಹೆಸರಿನಲ್ಲಿ ದರೋಡೆಗೆ ಸಂಚು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Update: 2024-08-21 19:19 IST

ಉಡುಪಿ: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಮಣೂರು ಬಸ್ ನಿಲ್ದಾಣದ ಎದುರು ನಕಲಿ ಐಟಿ ದಾಳಿ ಮಾಡುವ ನೆಪದಲ್ಲಿ ಮನೆಗೆ ನುಗ್ಗಿ ದರೋಡೆಗೆ ಸಂಚು ರೂಪಿಸಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ಮೂಲದ ಮುಂಬೈ ನಿವಾಸಿ ಸಂತೋಷ್ ನಾಯಕ್(45) ಹಾಗೂ ಕಾಪು ಪೊಲಿಪು ಮೂಲದ ದೇವರಾಜ್ ಸುಂದರ್ ಮೆಂಡನ್(46) ಬಂಧಿತ ಆರೋಪಿಗಳು. ಇವರನ್ನು ಇಂದು ಕುಂದಾಪುರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕೃತ್ಯಕ್ಕೆ ಬಳಸಿದ ಕಾರನ್ನು ಜಪ್ತಿ ಮಾಡಿ, ಉಳಿದ ಆರೋಪಿತರ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿತರು ನಕಲಿ ಐಟಿ ದಾಳಿ ಮಾಡುವ ನೆಪದಲ್ಲಿ ಮನೆಗೆ ನುಗ್ಗಿ ದರೋಡೆ ಮಾಡುವ ಸಂಚು ರೂಪಿಸಿ ಮಹಾರಾಷ್ಟ್ರದಿಂದ ಬಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಜಿಲ್ಲೆಯ ಸ್ಥಳಿಯ ಆರೋಪಿಗಳು ಕೂಡ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News