ಜ.25ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
ಉಡುಪಿ, ಜ.23: ವಿಜಯಾ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಶ್ರೀವೆಂಕಟರಮಣ ದೇವಸ್ಥಾನ ಆಡಳಿತ ಮಂಡಳಿ ಕರಂಬಳ್ಳಿ, ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ, ಉಡುಪಿ ಜಿಲ್ಲಾ ಕೃಷಿಕ ಸಂಘ, ಪತಾಂಜಲಿ ಯೋಗ ಸಮಿತಿ ಉಡುಪಿ ಮತ್ತು ಕೆಎಂಸಿ ಆಸ್ಪತ್ರೆ ಮಣಿಪಾಲ ಇವುಗಳ ಸಹಯೋಗದೊಂದಿಗೆ ಸಾರ್ವಜನಿಕರಿಗಾಗಿ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜ.25ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆ ತನಕ ಕರಂಬಳ್ಳಿ ಶ್ರೀವೆಂಕಟರಮಣ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ಮಾಜಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಕೆಎಂಸಿ ಸಮುದಾಯ ವೈದ್ಯಕೀಯ ವಿಭಾಗ ಮುಖ್ಯಸ್ಥ ಡಾ.ಅಶ್ವಿನಿ ಕುಮಾರ್ ಎಂ.ಡಿ. ಉದ್ಘಾಟಿಸಲಿದ್ದಾರೆ. ಸಾಮಾನ್ಯ ಆರೋಗ್ಯ ತಪಾಸಣೆ, ಚರ್ಮವ್ಯಾಧಿ ತಪಾಸಣೆ, ನೇತ್ರ ತಪಾಸಣೆ ಮತುತಿ ಕಣ್ಣಿನ ಪೊರೆ ಚಿಕಿತ್ಸೆ, ಸ್ತ್ರೀರೋಗ ತಪಾಸಣೆ, ಇಸಿಜಿ, ರಕತಿದೊತ್ತಡ ಮತ್ತು ರಕ್ತ ಪರೀಕ್ಷೆಗಳನ್ನು ಈ ತಪಾಸಣಾ ಶಿಬಿರದಲ್ಲಿ ನಡೆಸಲಾಗುವುದು ಎಂದು ಕೃಷಿಕ ಸಂಘದ ಕಾರ್ಯದರ್ಶಿ ರವೀಂದ್ರ ಗುಜ್ಜರಬೆಟ್ಟು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.