ಉಡುಪಿ: ಕುಸಿದು ಬಿದ್ದು ದೈಹಿಕ ಶಿಕ್ಷಣ ಶಿಕ್ಷಕ ಗಣೇಶ್ ದೇವಾಡಿಗ ಮೃತ್ಯು
Update: 2025-11-19 23:54 IST
ಉಡುಪಿ: ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಅಲೆವೂರು ಗ್ರಾಪಂ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ(51) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು.
ಶಾಲೆಗೆ ಕರ್ತವ್ಯಕ್ಕೆ ತೆರಳಿದ ಗಣೇಶ್ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎದೆನೋವಿನಿಂದ ಕುಸಿದು ಬಿದ್ದರು. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಮಾರ್ಪಳ್ಳಿ ನಿವಾಸಿಯಾಗಿದ್ದ ಇವರು ಸ್ಥಳೀಯ ಗೆಳೆಯರ ಬಳಗ, ಭಜನ ಮಂಡಳಿ ಹಾಗೂ ಗದ್ದಿಗೆ ಅಮ್ಮನವರ ಸಮಿತಿಯಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.